ಆಸ್ಪತ್ರೆಗೆ ತಾಯಿಯನ್ನು ನೋಡಲು ಬಂದಿದ್ದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ…

198
firstsuddi

ಶಿವಮೊಗ್ಗ : ಅನಾರೋಗ್ಯಕ್ಕೀಡಾಗಿದ್ದ ತಾಯಿಯನ್ನು ನೋಡಲು ಬಂದಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಆಸ್ಪತ್ರೆಯ ವಾರ್ಡ್ ಬಾಯ್ ತನ್ನ ಗೆಳೆಯರೊಂದಿಗೆ ಸೇರಿ ಅತ್ಯಾಚಾರ ಎಸಗಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಬಾಲಕಿಯ ತಾಯಿಗೆ ಅನಾರೋಗ್ಯ ಹಿನ್ನೆಲೆ, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಬಾಲಕಿ ತನ್ನ ತಾಯಿಯನ್ನು ನೋಡಲು ಆಸ್ಪತ್ರೆಗೆ ಬರುತ್ತಿದ್ದ ಬಾಲಕಿಯನ್ನು ಆಸ್ಪತ್ರೆಯ ವಾರ್ಡ್ ಬಾಯ್ ಮನೋಜ್ ಎಂಬುವವರು ಪರಿಚಯ ಮಾಡಿಕೊಂಡಿದ್ದರು. ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ ಇರುವ ಹಿನ್ನೆಲೆ, ನಗರದ ಹೋಟೆಲ್ ಗಳು ಮುಚ್ಚಲ್ಪಟ್ಟಿದ್ದವು. ಇದನ್ನೇ ಉಪಯೋಗಿಸಿಕೊಂಡ ವಾರ್ಡ್ ಬಾಯ್ ಬಾಲಕಿಯನ್ನು ಊಟ ಕೊಡಿಸುವುದಾಗಿ ಹೇಳಿ ಕಾರಿನಲ್ಲಿ ಕರೆದುಕೊಂಡು ಹೋಗಿ ತನ್ನ ಮೂವರು ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ್ದು, ಇದರಿಂದ ಅಸ್ವಸ್ಥಗೊಂಡ ಬಾಲಕಿಗೆ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಬಾಲಕಿಯ ತಾಯಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಸಿದ್ದು, ಪೊಲೀಸರು ಆಸ್ಪತ್ರೆಯ ವಾರ್ಡ್ ಬಾಯ್ ಮನೋಜ್ ನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಉಳಿದ ಮೂವರು ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.