ಆಸ್ಪತ್ರೆಯಲ್ಲೇ ಕೊರೊನಾ ಸೋಂಕಿತ ಯುವಕ ಆತ್ಮಹತ್ಯೆಗೆ ಶರಣು…

122
firstsuddi

ಕೊಪ್ಪಳ : ಕೊರೊನಾ ಸೋಂಕಿತ ಯುವಕನೋರ್ವ ಆಸ್ಪತ್ರೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಜಿಲ್ಲೆಯ ಕುಕನೂರ ತಾಲ್ಲೂಕಿನ ಚಿಕ್ಕ ಬಿಡನಾಳ ಗ್ರಾಮದ ನಿವಾಸಿಯಾಗಿದ್ದ 26 ವರ್ಷದ ಸೋಂಕಿತ ಯುವಕ ಕೊರೊನಾ ಸೋಂಕಿನಿಂದ ಕಳೆದ ಮೂರು ದಿನಗಳ ಹಿಂದೆ ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇದ್ದಕ್ಕಿದ್ದಂತೆ ಸೋಂಕಿತ ಯುವಕ ಕೋವಿಡ್ ವಾರ್ಡ್ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಯುವಕನಿಗೆ ಸೂಕ್ತ ಚಿಕಿತ್ಸೆ ಸಿಗದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೃತ ಯುವಕನ ಕುಟುಂಬಸ್ಥರು ಆರೋಪಿಸಿದ್ದಾರೆ.