ಆ್ಯಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತೆ!

128
firstsuddi

ಮೈಸೂರು : ಕೊರೊನಾ ಸೋಂಕಿತೆಯೊಬ್ಬರು ಆ್ಯಂಬುಲೆನ್ಸ್ ನಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಘಟನೆ ಜಿಲ್ಲೆಯ ಚಿಕ್ಕಳ್ಳಿ ಗ್ರಾಮದ ಬಳಿ ನಡೆದಿದೆ.

ಟಿ.ನರಸೀಪುರ ತಾಲ್ಲೂಕಿನ ತಲಕಾಡು ಗ್ರಾಮದ ನಿವಾಸಿಯಾಗಿರುವ ಸವಿತಾ (26) ಎಂಬುವವರು ಮಗುವಿಗೆ ಜನ್ಮ ನೀಡಿದ್ದಾರೆ. ಕೊರೊನಾ ದೃಢಪಟ್ಟ ಹಿನ್ನೆಲೆ ಗರ್ಭಿಣಿಯನ್ನು ಆ್ಯಂಬುಲೆನ್ಸ್ ನಲ್ಲಿ ಕರೆದೊಯ್ಯಲು ಸಿಬ್ಬಂದಿ ಹಿಂದೇಟು ಹಾಕಿದ್ದು, ಬಳಿಕ ಅಧಿರಿಕಾಗಳ ಆದೇಶ ಮೇರೆಗೆ ಆಸ್ಪತ್ರೆಗೆ ಕರೆದುಯ್ಯುತ್ತಿದ್ದರು. ಈ ವೇಳೆ ಮಾರ್ಗ ಮಧ್ಯದಲ್ಲೇ ಆ್ಯಂಬುಲೆನ್ಸ್ ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ-ಮಗು ಇಬ್ಬರು ಸುರಕ್ಷಿತವಾಗಿದ್ದು, ನಗರದ ವಿ.ವಿ. ಪುರಂ ಆಸ್ಪತ್ರೆಗೆ ದಾಖಲಿಸಲಾಗಿದೆ.