ಇ-ಮೇಲ್ ಮೂಲಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಪತ್ರ ಬರೆದ ಸಿಡಿ ಯುವತಿ..!

131
firstsuddi

ಬೆಂಗಳೂರು : ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಡಿ ಯುವತಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗೆ ಇ-ಮೇಲ್ ಮೂಲಕ ಪತ್ರ ಬರೆದಿದ್ದಾರೆ.

ಎಸ್ಐಟಿ ತನಿಖೆ ಮೇಲೆ ನನಗೆ ನಂಬಿಕೆಯಿಲ್ಲ. ನನ್ನ ಪೋಷಕರಿಂದ ಬಲವಂತವಾಗಿ ಹೇಳಿಕೆಯನ್ನು ಕೊಡಿಸಿಕೊಳ್ಳಲಾಗಿದೆ. ರಮೇಶ್ ಜಾರಕಿಹೊಳಿಯವರು ಒಬ್ಬ ಪ್ರಭಾವಿ ವ್ಯಕ್ತಿಯಾಗಿದ್ದು, ಸಾರ್ವಜನಿಕವಾಗಿ ಜೀವ ಬೆದರಿಕೆ ಹಾಕಿದ್ದಾರೆ. ಈ ಕೇಸ್ ನಲ್ಲಿ ನನಗೆ ಹಾಗೂ ನನ್ನ ಪೋಷಕರಿಗೆ ರಕ್ಷಣೆ ನೀಡಬೇಕು. ನಿಮ್ಮ ಮೇಲುಸ್ತುವಾರಿಯಲ್ಲಿ ಎಸ್ಐಟಿ ತನಿಖೆಯಾಗಬೇಕು. ಎಂದು ಸಿಡಿ ಯುವತಿ ನಿನ್ನೆಯೇ ಇ-ಮೇಲ್ ಮೂಲಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಪತ್ರವನ್ನು ರವಾನಿಸಿದ್ದಾರೆ.