ಇಂಗ್ಲೆಂಡ್ ವಿರುದ್ಧದ ಪಂದ್ಯದಿಂದ ಹಾರ್ದಿಕ್ ಪಾಂಡ್ಯ ಔಟ್…

79
firstsuddi

ಲಕ್ನೋ: ಗಾಯದ ಸಮಸ್ಯೆಗೆ ತುತ್ತಾಗಿರುವ ಟೀಂ ಇಂಡಿಯಾ ಉಪನಾಯಕ ಹಾರ್ದಿಕ್ ಪಾಂಡ್ಯ ಅವರು ಇದೇ ಅಕ್ಟೋಬರ್ 29ರ ಭಾನುವಾರ ಲಕ್ನೋದಲ್ಲಿ ನಡೆಯಲಿರುವ ಇಂಗ್ಲೆಂಡ್ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ವರದಿಯಾಗಿದೆ.

ಧರ್ಮಶಾಲಾದಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಿಂದ ಹೊರಗುಳಿದಿದ್ದ ಪಂದ್ಯ ಲಕ್ನೋದಲ್ಲಿ ನಡೆಯಲಿರುವ ಪಂದ್ಯಕ್ಕೆ ಲಭ್ಯವಾಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಇನ್ನೂ ಗಾಯದಿಂದ ಹಾರ್ದಿಕ್ ಪಾಂಡ್ಯ ಚೇತರಿಸಿಕೊಂಡಿಲ್ಲ.

ಆರಂಭದಲ್ಲಿ ಪಾಂಡ್ಯ ಮೊಣಕಾಲಿಗೆ ಆದ ಗಾಯ ಸಣ್ಣ ಪ್ರಮಾಣದ್ದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಗಾಯ ಗಂಭೀರ ಸ್ವರೂಪದ್ದು ಎನ್ನುವುದು ಈಗ ದೃಢಪಟ್ಟಿದೆ.

ಒಂದು ವೇಳೆ ಪಾಂಡ್ಯ ಪಂದ್ಯವಾಡದೇ ಇದ್ದರೆ ವೇಗದ ಬೌಲರ್ ಮತ್ತು ಬ್ಯಾಟರ್ ಕೊರತೆಯಾಗಲಿದೆ. ಪಾಂಡ್ಯ ಆಲ್‌ರೌಂಡರ್‌ ಸ್ಥಾನವನ್ನು ತುಂಬಬಹುದಾದ ಆಟಗಾರರು ಸದ್ಯಕ್ಕೆ ಸಿಗದೇ ಇದ್ದರೂ ಬ್ಯಾಟರ್ ಸೂರ್ಯಕುಮಾರ್ ಯಾದವ್ ಅವರಿಗೆ ಮತ್ತೊಮ್ಮೆ ಅವಕಾಶ ಸಿಗುವ ಸಾಧ್ಯತೆಯಿದೆ.

ಟೀಂ ಇಂಡಿಯಾದ ವಿಶ್ವಕಪ್ 2023ರ ನಾಲ್ಕನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಬೌಲಿಂಗ್ ಮಾಡುವಾಗ ಹಾರ್ದಿಕ್ ಪಾಂಡ್ಯ ಗಾಯಗೊಂಡಿದ್ದರು. ಬೌಲಿಂಗ್ ಮಾಡುವಾಗ, ಸ್ಟ್ರೈಟ್ ಡ್ರೈವ್ ಅನ್ನು ನಿಲ್ಲಿಸಲು ಪ್ರಯತ್ನಿಸುವಾಗ ಅವರು ಎಡಗಾಲಿನ ನೋವಿಗೆ ತುತ್ತಾದರು. ಹೀಗಾಗಿ ಅವರನ್ನು ಸ್ಕ್ಯಾನ್​ಗೆ ಒಳಪಡಿಸಲಾಯಿತು. ವರದಿಯಲ್ಲಿ ಪಾಂಡ್ಯ ಕಾಲಿನಲ್ಲಿ ಯಾವುದೇ ಒತ್ತಡ ಅಥವಾ ಮುರಿತ ಕಂಡುಬರದಿದ್ದರೂ, ಅವರು ಚಿಕಿತ್ಸೆಗಾಗಿ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿಗೆ ಹೋಗಬೇಕಾಯಿತು.