ಇಂಡಿಗೋ ವಿಮಾನದಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ – ಸ್ವೀಡಿಷ್ ಪ್ರಜೆ ಅರೆಸ್ಟ್…

60
firstsuddi

ನವದೆಹಲಿ : ಬ್ಯಾಂಕಾಕ್‌ನಿಂದ ಮುಂಬೈಗೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಹಿಳಾ ಸಿಬ್ಬಂದಿಗೆ ಕಿರುಕುಳ ನೀಡಿದ ಆರೋಪದ ಮೇಲೆ 62 ವರ್ಷದ ಸ್ವೀಡಿಷ್ ಪ್ರಜೆಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ವ್ಯಕ್ತಿಯನ್ನು ಕ್ಲಾಸ್ ಎರಿಕ್ ಹೆರಾಲ್ಡ್ ಜೋನಾಸ್ಮ್ (62) ಎಂದು ಗುರುತಿಸಲಾಗಿದೆ. ಕ್ಲಾಸ್ ಎರಿಕ್ ಹೆರಾಲ್ಡ್ ಜೋನಾಸ್ಮ್ ಮದ್ಯಪಾನ ಮಾಡಿದ್ದರು ಮತ್ತು ಆಹಾರ ಖರೀದಿಗೆ ಪಾವತಿ ಮಾಡುವಾಗ ಸಿಬ್ಬಂದಿಯನ್ನು ಅನುಚಿತವಾಗಿ ಸ್ಪರ್ಶಿಸಿದ್ದಾರೆ ಎಂದು ದೂರು ದಾಖಲಿಸಿದ್ದರು.

ಮುಂಬೈನಲ್ಲಿ ವಿಮಾನ ಲ್ಯಾಂಡ್ ಆಗುತ್ತಿದ್ದಂತೆ ಕ್ಲಾಸ್ ಎರಿಕ್ ನನ್ನು ಏರ್‌ಲೈನ್ಸ್ ಸಿಬ್ಬಂದಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಅವರನ್ನು ಅಂಧೇರಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಜಾಮೀನು ನೀಡಲಾಗಿದೆ.

ಕಳೆದ ಮೂರು ತಿಂಗಳಲ್ಲಿ ಭಾರತದಲ್ಲಿ ಬಂಧಿಸಲ್ಪಟ್ಟ ಎಂಟನೇ ಅಶಿಸ್ತಿನ ವಿಮಾನ ಪ್ರಯಾಣಿಕ ಎಂದು ಅಧಿಕಾರಿಗಳು ತಿಳಿಸಿದ್ದಾರೆ.