ಇಂದಿನಿಂದ ಅಮರನಾಥ ಯಾತ್ರೆ ಆರಂಭ : 2,750 ಯಾತ್ರಿಕರ ಪ್ರಯಾಣ…

56
firstsuddi

ಶ್ರೀನಗರ : ಎರಡು ವರ್ಷಗಳ ನಂತರ ಇಂದಿನಿಂದ ಅಮರನಾಥ ಯಾತ್ರೆ ಆರಂಭವಾಗಿದ್ದು, ಸುಮಾರು 2,750 ಯಾತ್ರಾರ್ಥಿಗಳ ತಂಡ ಇಂದು ಯಾತ್ರೆಯನ್ನು ಪ್ರಾರಂಭಿಸಿದ್ದಾರೆ. ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನ ನುನ್ವಾನ್ ಮೂಲ ಶಿಬಿರದಿಂದ ಜಿಲ್ಲಾಧಿಕಾರಿ ಪಿಯೂಷ್ ಸಿಂಗ್ಲ ಯಾತ್ರೆಗೆ ಚಾಲನೆ ನೀಡಿದರು.

ಬಿಗಿ ಭದ್ರತಾ ವ್ಯವಸ್ಥೆ ನಡುವೆ ಜಮ್ಮುವಿನ ಭಗವತಿ ನಗರ ಮೂಲ ಶಿಬಿರದಿಂದ ಯಾತ್ರೆ ಆರಂಭವಾಯಿತು. ಕಾಶ್ಮೀರ ಕಣಿವೆಯಲ್ಲಿರುವ ಅಮರನಾಥ ಗುಹ ದೇವಾಲಯಕ್ಕೆ ಈ ವರ್ಷದ 43 ದಿನಗಳ ವಾರ್ಷಿಕ ಯಾತ್ರೆ ಇಂದಿನಿಂದ ಕಾಶ್ಮೀರ ಕಣಿವೆಯ ಪಹಲ್ ಗಾಮ್ ಮತ್ತು ಬಲ್ ತಾಲ್ ಮಾರ್ಗಗಳಿಂದ ಆರಂಭವಾಗಲಿದೆ.

ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ಮಂಜುಗಡ್ಡೆಯಿಂದ ನಿರ್ಮಿತವಾಗಿರುವ ಲಿಂಗದ ದರ್ಶನವನ್ನು ಮಾಡುವ ಪವಿತ್ರ ಯಾತ್ರೆ ಅಮರನಾಥ ಯಾತ್ರೆ ಅತ್ಯಂತ ಜನಪ್ರಿಯ, ಪ್ರತಿವರ್ಷ ಸಾವಿರಾರು ಮಂದಿ ಯಾತ್ರಿಕರು ಭೇಟಿ ನೀಡುತ್ತಾರೆ.