ಇಂದಿನಿಂದ ಎರಡು ದಿನ ಬ್ಯಾಂಕ್ ಬಂದ್ : ಸಾರ್ವಜನಿಕರಿಗೆ ತಟ್ಟಲಿದೆ ಬಂದ್ ಬಿಸಿ…

116
Firstsuddi

ಬೆಂಗಳೂರು : ಬ್ಯಾಂಕ್ ಗಳ ಖಾಸಗೀಕರಣವನ್ನು ವಿರೋಧಿಸಿ ಇಂದು ಮತ್ತು ನಾಳೆ ರಾಷ್ಟ್ರೀಕೃತ ಬ್ಯಾಂಕ್ ನೌಕರರು ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣವನ್ನು ವಿರೋಧಿಸಿ ಮಾರ್ಚ್ 15 ರಿಂದ ಎರಡು ದಿನಗಳ ಮುಷ್ಕರ ನಡೆಸುವುದಾಗಿ ಬ್ಯಾಂಕ್ ಯೂನಿಯನ್ ಗಳ ಸಂಯುಕ್ತ ವೇದಿಕೆ ಕರೆ ಕೊಟ್ಟಿದೆ. ಈ ಹಿನ್ನೆಲೆ ಇಂದು ಮೈಸೂರು ಬ್ಯಾಂಕ್ ವೃತ್ತದಲ್ಲಿ ಧರಣಿ ನಡೆಸಲಿದ್ದು, ಸಾವಿರಾರು ಬ್ಯಾಂಕ್ ನೌಕರರು ಭಾಗಿಯಾಗಲಿದ್ದಾರೆ. ಬ್ಯಾಂಕ್ ನೌಕರರ ಮುಷ್ಕರದಿಂದ ಗ್ರಾಹಕರಿಗೆ ಸಮಸ್ಯೆಯಾಗುವ ಸಾಧ್ಯತೆಗಳಿವೆ.