ಬೆಂಗಳೂರು : ರಾಜ್ಯಾದ್ಯಂತ ಇಂದಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಆರಂಭಗೊಳ್ಳುತ್ತಿದ್ದು, ಏಪ್ರಿಲ್ 15ರವರೆಗೆ ನಡೆಯಲಿವೆ. ಮೊದಲ ದಿನವಾದ ಇಂದು ಪ್ರಥಮ ಭಾಷೆಯ ಪರೀಕ್ಷೆ ನಡೆಯಲಿದೆ.
ವಿದ್ಯಾರ್ಥಿಗಳಿಗೆ ಸಮವಸ್ತ್ರ ಕಡ್ಡಾಯ ಮಾಡಲಾಗಿದೆ. ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಇಲ್ಲ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಅವಕಾಶ ನೀಡಲಾಗಿದೆ.
ಈ ಬಾರಿ ಒಟ್ಟು 8,42,811 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, ರಾಜ್ಯಾದ್ಯಂತ ಒಟ್ಟು 3,305 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ವಿದ್ಯಾರ್ಥಿಗಳಿಗೆ ಸ್ಮಾರ್ಟ್ವಾಚ್, ಮೊಬೈಲ್ ಎಲೆಕ್ಟ್ರಿಕ್ ಉಪಕರಣಗಳನ್ನು ನಿಷೇಧಿಸಲಾಗಿದೆ. ಪರೀಕ್ಷಾ ಸಿಬ್ಬಂದಿಗೂ ಮೊಬೈಲ್, ಸ್ಮಾರ್ಟ್ ವಾಚ್ ನಿಷೇಧ ಮಾಡಲಾಗಿದೆ. ಬೆಂಗಳೂರು ಸೇರಿ ಎಲ್ಲಾ ಜಿಲ್ಲೆಗಳಲ್ಲಿ ಎಕ್ಸಾಂ ಮುಗಿಯೋವರೆಗೆ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಅಂಗಡಿ, ಸೈಬರ್ ಸೆಂಟರ್ ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ.










