ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ – ಮೊದಲ ದಿನವೇ ಮೂರು ಕೃಷಿ ಕಾನೂನುಗಳ ರದ್ದತಿಗೆ ಆದ್ಯತೆ…

77
firstsuddi

ನವದೆಹಲಿ : ಇಂದಿನಿಂದ ಸಂಸತ್ತಿನ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಕಲಾಪದ ಮೊದಲ ದಿನವೇ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಗೆ ಕೇಂದ್ರ ಸರ್ಕಾರ ಆದ್ಯತೆ ನೀಡಲಿದೆ.

ಇಂದಿನಿಂದ ಚಳಿಗಾಲದ ಅಧಿವೇಶನವು ಪ್ರಾರಂಭವಾಗಿ, ಡಿಸೆಂಬರ್ 23ರಂದು ಮುಕ್ತಾಯಗೊಳ್ಳಲಿದೆ. ಇಂದು ಎಲ್ಲ ಸಂಸದರು ಉಭಯ ಸದನಗಳಲ್ಲಿ ಹಾಜರಿರಬೇಕೆಂದು ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ವಿಪ್ ಜಾರಿ ಮಾಡಿವೆ. ಕಾಂಗ್ರೆಸ್ ಸೇರಿದಂತೆ ಅನೇಕ ಪಕ್ಷಗಳು ಕೇಂದ್ರದ ವಿರುದ್ಧ ಹರಿಹಾಯುವ ಸಾಧ್ಯತೆ ಇದೆ.

ಚಳಿಗಾಲದ ಅಧಿವೇಶನದ 19 ಅಧಿವೇಶನಗಳಲ್ಲಿ ಸರ್ಕಾರವು 36 ಶಾಸಕಾಂಗ ಮಸೂದೆಗಳು ಮತ್ತು ಒಂದು ಹಣಕಾಸು ಮಸೂದೆಯನ್ನು ಮಂಡಿಸುವ ನಿರೀಕ್ಷೆಯಿದೆ. ಕೃಷಿ ಕಾನೂನುಗಳ ರದ್ದತಿ ಮಸೂದೆಯನ್ನು ಮೊದಲ ದಿನ ಲೋಕಸಭೆಯಲ್ಲಿ ಪರಿಚಯಿಸಲು ಮತ್ತು ಅಂಗೀಕರಿಸಲು ಪಟ್ಟಿ ಮಾಡಲಾಗಿದೆ. ಇದನ್ನು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಪರಿಚಯಿಸಲಿದ್ದಾರೆ.

ಅಧಿವೇಶನದಲ್ಲಿ ಅಂಗೀಕರಿಸಬೇಕಾದ ಇತರ ಮಸೂದೆಗಳಲ್ಲಿ ಕೃಷಿ ಕಾಯ್ದೆ ರದ್ದು ಮಸೂದೆ, ಇಂಧನ ಬೆಲೆ ಏರಿಕೆ, ಹಣದುಬ್ಬರ, ಕ್ರಿಪ್ಟೋ ಕರೆನ್ಸಿ, ಲಖೀಂಪುರಿ ಖೇರಿ ಹಿಂಸಾತ್ಮಕ ಘಟನೆ ಸೇರಿದಂತೆ ಅನೇಕ ವಿಚಾರಗಳು ಪ್ರಸ್ತಾಪಗೊಳ್ಳಲಿವೆ.