ಇಂದಿನಿಂದ ನಾಲ್ಕು ದಿನ ಮೋದಿ ಅಮೆರಿಕ ಪ್ರವಾಸ – ದೆಹಲಿಯಿಂದ ವಿಶೇಷ ವಿಮಾನದಲ್ಲಿ ಪ್ರಯಾಣ ಬೆಳೆಸಿದ ಪ್ರಧಾನಿ.

85
firstsuddi

ನವದೆಹಲಿ : ಇಂದಿನಿಂದ ನಾಲ್ಕು ದಿನಗಳ ಕಾಲ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸ ಕೈಗೊಂಡಿದ್ದು, ಈ ಹಿನ್ನಲೆ ಇಂದು ದೆಹಲಿಯಿಂದ ಪ್ರಯಾಣ ಬೆಳೆಸಿದ ನರೇಂದ್ರ ಮೋದಿ ರಾತ್ರಿ ವೇಳೆಗೆ ಅಮೆರಿಕಾದ ವಾಷಿಂಗ್ಟನ್ ಡಿ.ಸಿ. ತಲುಪಲಿದ್ದಾರೆ.

ಸೆಪ್ಟೆಂಬರ್ 24ರಂದು ಶ್ವೇತಭವನದಲ್ಲಿ ಜೋ ಬೈಡನ್, ಕ್ವಾಡ್ ನಾಯಕರ ಶೃಂಗಸಭೆಯನ್ನು ಆಯೋಜಿಸಿದ್ದು, ಇದರಲ್ಲಿ ಮೋದಿ ಭಾಗಿಯಾಗಲಿದ್ದಾರೆ.

ನರೇಂದ್ರ ಮೋದಿ ಮತ್ತು ಜೋ ಬೈಡನ್ ದ್ವಿಪಕ್ಷೀಯ ಸಭೆ ನಡೆಸಲಿದ್ದು, ಈ ಸಭೆಯಲ್ಲಿ ಉಭಯ ರಾಷ್ಟ್ರಗಳ ನಡುವಿನ ಸಂಬಂಧ ವೃದ್ಧಿಯ ಕುರಿತು ಚರ್ಚೆ ನಡೆಸಲಿದ್ದಾರೆ. ಆ ಬಳಿಕ ಮೋದಿಯವರು ಅಮೆರಿಕ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರೊಂದಿಗೂ ಸಭೆ ನಡೆಸಲು ನಿರ್ಧರಿಸಿದ್ದಾರೆ.

ಸೆಪ್ಟೆಂಬರ್ 24ರಂದು ಸಂಜೆ ವಾಷಿಂಗ್ಟನ್ ಡಿಸಿಯಿಂದ ನರೇಂದ್ರ ಮೋದಿ ನ್ಯೂಯಾರ್ಕ್ ಪ್ರಯಾಣ ಮಾಡಲಿದ್ದು, ಸೆಪ್ಟೆಂಬರ್ 25ರಂದು ನ್ಯೂಯಾರ್ಕ್ ನಲ್ಲಿ ನಡೆಯುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿ ಮೋದಿ ಭಾಷಣ ಮಾಡಲಿದ್ದಾರೆ. ಬಳಿಕ ಸೆ.26ರಂದು ಮೋದಿ ಭಾರತಕ್ಕೆ ಹಿಂದಿರುಗಲಿದ್ದಾರೆ.