ಬೆಂಗಳೂರು : ಇಂದಿನಿಂದ ಚಂಡಮಾರುತದ ಆತಂಕ ಎದುರಾಗಿರುವುದರಿಂದ ಇನ್ನೂ 3 ದಿನ ಭಾರೀ ಮಳೆಯಾಗಲಿದೆ. ಚೆನ್ನೈಗೆ ಅಪ್ಪಳಿಸುವ ಚಂಡಮಾರುತ ರಾಜ್ಯದ ಮೇಲೂ ಪ್ರಭಾವ ಬೀರಲಿದೆ. ಹೀಗಾಗಿ ಇಂದಿನಿಂದ ನ. 28ರವರೆಗೆ ಮುನ್ನೆಚ್ಚರಿಕೆ ನೀಡಲಾಗಿದೆ.
ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಡಿಸಿಗಳು ಚಂಡಮಾರುತ ಹಾಗೂ ಮಳೆಯ ಹಾನಿಯ ನಿಯಂತ್ರಣದ ಕಡೆ ಗಮನ ನೀಡಬೇಕು ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಮೂರ್ನಾಲ್ಕು ದಿನಗಳಿಂದ ಜನರಿಗೆ ರಿಲೀಫ್ ಕೊಟ್ಟಿದ್ದ ಮಳೆರಾಯ ಮತ್ತೆ ಅಬ್ಬರಿಸಲಿದ್ದಾನೆ. ಹೀಗಾಗಿ ಜನರಲ್ಲಿ ಮತ್ತೆ ಮಳೆ ಆತಂಕ ಎದುರಾಗಿದೆ.










