ಇಂದಿನಿಂದ ವಿಸ್ಟ್ರಾನ್ ಕಂಪನಿ ಪುನರಾರಂಭ ; ಕಂಪನಿಗೆ ಸಚಿವ ಜಗದೀಶ್ ಶೆಟ್ಟರ್ ಭೇಟಿ…

156
Firstsuddi

ಕೋಲಾರ : ವೇತನ ಸಮಸ್ಯೆಯಿಂದಾಗಿ ಕಾರ್ಮಿಕರು ಸಿಟ್ಟಿಗೆದ್ದು ದಾಂದಲೆ ನಡೆಸಿದ ಕಾರಣ ದೇಶವ್ಯಾಪಿ ಸುದ್ದಿಯಾಗಿದ್ದ ವಿಸ್ಟ್ರಾನ್ ಕಂಪನಿ ಇಂದಿನಿಂದ ಪುನರಾರಂಭಗೊಂಡಿದೆ. ಈ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆಯ ನರಸಾಪುರ ಬಳಿಯಿರುವ ವಿಸ್ಟ್ರಾನ್ ಕಂಪನಿಗೆ ಸಚಿವ ಜಗದೀಶ್ ಶೆಟ್ಟರ್ ಅವರು ಭೇಟಿ ನೀಡಿ ಜಿಲ್ಲಾಧಿಕಾರಿ, ಕಂಪನಿ ಅಧಿಕಾರಿಗಳು ಹಾಗೂ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿದ್ದಾರೆ.

ಹಿಂಸೆ ಯಾವುದಕ್ಕೂ ಪರಿಹಾರವಲ್ಲ. ಸಮಸ್ಯೆಗಳ ಪರಿಹಾರಕ್ಕೆ ಅಧಿಕಾರಿಗಳನ್ನು ಸಂಪರ್ಕಿಸಿ ಎಂದು ವಿಸ್ಟ್ರಾನ್‌ ಕಾರ್ಮಿಕರಿಗೆ ಮಧ್ಯಮ ಕೈಗಾರಿಕಾ ಸಚಿವರಾದ ಜಗದೀಶ ಶೆಟ್ಟರ್ ಅವರು ಸಲಹೆ ನೀಡಿದರು. ಹಿಂಸಾಚಾರದಂತಹ ಅನಾವಶ್ಯಕ ಘಟನೆಗಳಿಂದ ಸಾವಿರಾರು ಉದ್ಯೋಗಿಗಳ ಜೀವನ ಬೀದಿಪಾಲಾಗುವ ಸಮಸ್ಯೆ ಎದುರಾಗುತ್ತದೆ. ಅಂದು ನಡೆದ ಘಟನೆಯಿಂದಾಗಿ ಕಾರ್ಖಾನೆ ಮುಚ್ಚಬೇಕಾಯಿತು. ಆದ್ದರಿಂದ ಮುಂದಿನ ದಿನಗಳಲ್ಲಿ ಯಾವುದೇ ರೀತಿಯ ಸಮಸ್ಯೆಗಳು ಉದ್ಭವವಾದಲ್ಲಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳಿ. ಅಲ್ಲಿಯೂ ಪರಿಹಾರ ದೊರಕದೇ ಇದ್ದ ಸಂಧರ್ಭದಲ್ಲಿ ಸರ್ಕಾರಿ ಅಧಿಕಾರಿಗಳನ್ನು ಸಂಪರ್ಕಿಸುವಂತೆ ವಿಸ್ಟ್ರಾನ್ ಉದ್ಯೋಗಿಗಳಿಗೆ ಸಲಹೆ ನೀಡಿದರು.