ಇಂದಿನಿಂದ ಹಾಸನಾಂಬೆ ದರ್ಶನಕ್ಕೆ ಭಕ್ತರಿಗೆ ಅವಕಾಶ…

68
firstsuddi

ಹಾಸನ : ವರ್ಷಕ್ಕೊಮ್ಮೆ ಮಾತ್ರ ದರ್ಶನ ನೀಡುವ ಹಾಸನಾಂಬಾ ದೇವಿ ಇನ್ಮುಂದೆ ಭಕ್ತರಿಗೆ ದರ್ಶನ ಕೊಡಲಿದ್ದಾಳೆ. ಎರಡು ವರ್ಷಗಳ ಬಳಿಕ ಹಾಸನಾಂಬೆ ದೇವಾಲಯದ ಇಂದಿನಿಂದ ಓಪನ್ ಆಗಲಿದ್ದು, ದೇವಿಯ ದರ್ಶನಕ್ಕೆ ಭಕ್ತರು ಕಾತರದಿಂದ ಕಾಯುತ್ತಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆ ನಂತರ ಹಾಸನಾಂಬೆ ದೇವಾಲಯ ಬಾಗಿಲು ತೆರೆಯಲಿದೆ. ಈ ಬಾರಿ ಇಂದು ಮತ್ತು ನವೆಂಬರ್ 6ರಂದು ಹೊರತುಪಡಿಸಿ ಬೇರೆಲ್ಲಾ ದಿನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಬೆಳಗ್ಗೆ 6 ರಿಂದ ಮಧ್ಯಾಹ್ನ 1 ಹಾಗೂ ಮಧ್ಯಾಹ್ನ 3 ರಿಂದ ರಾತ್ರಿ 8 ರವರೆಗೆ ಭಕ್ತರ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಕೊರೊನಾ ಕಾರಣ ಎರಡು ಲಸಿಕೆ ಪಡೆದಿದ್ದವರಿಗೆ ಮಾತ್ರ ದೇವಾಲಯದ ಒಳಗೆ ದರ್ಶನಕ್ಕೆ ಅವಕಾಶವಿರುತ್ತದೆ.

ದೇವಾಲಯದ ಬಾಗಿಲು ಹಾಕುವಾಗ ಹಚ್ಚಿಟ್ಟಿದ್ದ ದೀಪವು ಆರದೇ, ಮುಡಿಸಿದ ಹೂ ಬಾಡದೇ ಹಾಗೂ ನೈವೇದ್ಯಕ್ಕಿಟ್ಟ ಅಕ್ಕಿಯು ಅನ್ನವಾಗಿರುವುದು ಈ ದೇವಿಯ ವಿಶೇಷ ಶಕ್ತಿಯಾಗಿದ್ದು ಇದರಿಂದಾಗಿಯೇ ಸಹಸ್ರ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ.