ಇಂದಿನಿಂದ ಹಾಸನಾಂಬ ದೇಗುಲದ ಬಾಗಿಲು ಓಪನ್…

43
firstsuddi

ಹಾಸನ : ವರ್ಷಕ್ಕೊಮ್ಮೆ ಮಾತ್ರ ದರ್ಶನ ಕರುಣಿಸಲಿರುವ ಇತಿಹಾಸ ಪ್ರಸಿದ್ಧ ಹಾಸನಾಂಬ ದೇವಾಲಯದ ಬಾಗಿಲು ಇಂದು ತೆರೆಯಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಬಾಗಿಲು ಓಪನ್ ಮಾಡಲಾಗಿದೆ. ಇಂದಿನಿಂದ ಅಕ್ಟೋಬರ್ 27ರವರೆಗೂ ದೇಗುಲದ ಬಾಗಿಲು ಓಪನ್ ಆಗಿರುತ್ತದೆ. ಆದರೆ ಮೊದಲ ದಿನವಾದ ಇಂದು ಸಾರ್ವಜನಿಕರಿಗೆ ದೇವರ ದರ್ಶನಕ್ಕೆ ಅವಕಾಶ ಇರುವುದಿಲ್ಲ. ನಾಳೆ(ಅ.13) ಬೆಳಗ್ಗೆ 6 ಗಂಟೆಯಿಂದ ಸಾರ್ವಜನಿಕರಿಗೆ ದರ್ಶನ ಭಾಗ್ಯ ದೊರೆಯಲಿದೆ.

ಕೊರೊನಾ ಹಿನ್ನೆಲೆಯಲ್ಲಿ ಕಳೆದೆರಡು ವರ್ಷದಿಂದ ಹಾಸನಾಂಬ ಉತ್ಸವದ ವೈಭವ ತಗ್ಗಿತ್ತು. ಆದರೆ, ಈ ಸಲ ಅದ್ಧೂರಿ ಉತ್ಸವಕ್ಕೆ ಜಿಲ್ಲಾಡಳಿತ ತಯಾರಾಗಿದೆ. ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಬರುವ ನಿರೀಕ್ಷೆಯಿದ್ದು, ಈಗಾಗಲೇ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪೊಲೀಸರು ಕೂಡ ಮುಂಜಾಗೃತ ಕ್ರಮಕೈಗೊಂಡಿದ್ದಾರೆ.