ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ಇಂದು ರಾಷ್ಟ್ರೀಯ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಆಗಮಿಸಲಿದ್ದಾರೆ.
ಫೆ.14ರಂದು ನಗರದ ವೈಟ್ ಫೀಲ್ಡ್ ಖಾಸಗಿ ಹೋಟೆಲ್ನಲ್ಲಿ ಅದ್ಧೂರಿಯಾಗಿ ಮದುವೆ ಸಮಾರಂಭ ನೆರವೇರಿತ್ತು. ಇಂದು ಸಂಜೆ ಬೆಂಗಳೂರಿನ ಪಂಚತಾರಾ ಹೋಟೆಲ್ ನಲ್ಲಿ ನಡೆಯಲಿರುವ ಡಿಕೆಶಿ ಪುತ್ರಿ ಐಶ್ವರ್ಯ ಹಾಗೂ ಉದ್ಯಮಿ ಅಮರ್ತ್ಯ ಹೆಗ್ಡೆ ಅವರ ಆರತಕ್ಷತೆ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ, ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಅಜಾದ್ ಹಾಗೂ ಪುದುಚೇರಿ ಸಿಎಂ ನಾರಾಯಣಸ್ವಾಮಿ ಅವರು ಆಗಮಿಸಲಿದ್ದಾರೆ ಎನ್ನಲಾಗಿದೆ.










