ಇಂದು ದೇಶದಾಧ್ಯಂತ “ಹಿಂದಿ ದಿವಸ್” ಆಚರಣೆ, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಹೆಚ್‍ಡಿಕೆ…

295
firstsuddi

ಬೆಂಗಳೂರು : ಇಂದು ದೇಶದಾಧ್ಯಂತ ಹಿಂದಿ ಕೇಂದ್ರ ಸರ್ಕಾರ ದಿವಸವನ್ನು ಆಚರಿಸುತ್ತಿದ್ದು, ಈ ಕುರಿತು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ತಮ್ಮ ಟ್ವಿಟರ್ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, “ಇಂದು ದೇಶದಾದ್ಯಂತ ಕೇಂದ್ರ ಸರ್ಕಾರ ‘ಹಿಂದಿ ದಿವಸ್’ ಆಚರಿಸುತ್ತಿದೆ. ಸಂವಿಧಾನದಲ್ಲಿ ಹಿಂದಿಯೊಂದಿಗೆ ಅಧಿಕೃತ ಭಾಷೆ ಎನಿಸಿಕೊಂಡಿರುವ ಕನ್ನಡದ ಭಾಷಾ ದಿವಸವನ್ನು ದೇಶಾದ್ಯಂತ ಯಾವಾಗ ಆಚರಿಸುತ್ತೀರಿ ನರೇಂದ್ರ ಮೋದಿಯವರೇ? ಕನ್ನಡಿಗರೂ ಈ ಒಕ್ಕೂಟ ವ್ಯವಸ್ಥೆಯ ಭಾಗವಾಗಿದ್ದಾರೆ ನೆನಪಿರಲಿ ಎಂದು ಟ್ವೀಟ್ ಮಾಡಿದ್ದಾರೆ.