ಇಂದು ಬಂಡೀಪುರದಲ್ಲಿ ಸಫಾರಿ ಬಂದ್…

66
firstsuddi

ಚಾಮರಾಜನಗರ: ಹುಲಿ ಸಂರಕ್ಷಿತ ಪ್ರದೇಶ ಹಾಗೂ ಸಫಾರಿ ಕೇಂದ್ರವಾದ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಇಂದು ಒಂದು ದಿನದ ಮಟ್ಟಿಗೆ ಸಫಾರಿ ಬಂದ್ ಮಾಡಲಾಗಿದೆ.

ಬಂಡೀಪುರ ಅರಣ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಂಚೂಣಿ ಸಿಬ್ಬಂದಿ ಸೇವೆ ಹಾಗೂ ಸಾಧನೆ ಸ್ಮರಿಸಿ ಗೌರವ ಸಲ್ಲಿಸುವ ಸಲುವಾಗಿ ಬಂಡೀಪುರ ಅರಣ್ಯ ಮುಂಚೂಣಿ ಸಿಬ್ಬಂದಿ ದಿನಾಚರಣೆಯನ್ನು ಮಾಡಲಾಗುತ್ತಿದೆ.

ಈ ವೇಳೆ ಬಂಡೀಪುರದ ಬಹುತೇಕ ಎಲ್ಲಾ ಸಿಬ್ಬಂದಿ ಕೂಡ ಪಾಲ್ಗೊಳ್ಳುತ್ತಾರೆ. ಅರಣ್ಯ ಸಿಬ್ಬಂದಿಗಳಿಗೆ ಮೊದಲ ಬಾರಿಗೆ ಗೌರವ ಕೊಡಲು ಇಂತಹ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಹೀಗಾಗಿ ಪ್ರವಾಸಿಗರಿಗೆ ಸಫಾರಿ ಬಂದ್ ಮಾಡಿರುವ ಕುರಿತು ಬಂಡೀಪುರ ಹುಲಿಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.