ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಏರಿಕೆ…

55
firstsuddi

ನವದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಇಂದು ಮತ್ತೆ ಏರಿಕೆ ಆಗಿದ್ದು, ಪ್ರತಿ ಲೀಟರ್ ಪೆಟ್ರೋಲ್ ಹಾಗೂ ಡೀಸೆಲ್ ಗೆ 80 ಪೈಸೆ ಏರಿಕೆಯಾಗಿದೆ. ಕಳೆದ ಒಂಬತ್ತು ದಿನಗಳಲ್ಲಿ ಒಟ್ಟು 8ನೇ ಬಾರಿಗೆ ದರ ಏರಿಕೆ ಮಾಡಲಾಗಿದೆ. ಈ ಮೂಲಕ ಒಂದೇ ವಾರದಲ್ಲಿ ಲೀಟರ್ ಗೆ 5.60ರೂ. ಏರಿಕೆಯಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ಬೆಲೆ ಪ್ರತಿ ಲೀಟರ್ ಗೆ 101.01 ರೂಪಾಯಿಗೆ ಏರಿಕೆಯಾದರೆ, ಡೀಸೆಲ್ ಬೆಲೆ ರೂ.92.27 ದಾಖಲಾಗಿದೆ. ಮುಂಬೈನಲ್ಲಿ ಪ್ರತಿ ಲೀಟರ್ ಪೆಟ್ರೋಲ್ ಬೆಲೆ 115.88 ರೂ. ಇದ್ದರೆ, ಡೀಸೆಲ್ 100.10 ರೂ. ಇದೆ. ಚೆನ್ನೈನಲ್ಲಿ ಪೆಟ್ರೋಲ್ ಬೆಲೆ 106.69 ರೂ ಮತ್ತು ಡೀಸೆಲ್ ಬೆಲೆ 96.76 ರೂ ಗೆ ಮಾರಾಟ ಮಾಡಲಾಗುತ್ತಿದೆ. ಕೋಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ 110.52 ರೂ. ಮತ್ತು ಡೀಸೆಲ್ ಬೆಲೆ 95.42 ರೂ. ಆಗಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿ ಲೀಟರ್ ಗೆ 105.62 ರೂ. ಇದ್ದ ಪೆಟ್ರೋಲ್ ದರ 106.46 ರೂಪಾಯಿಗೆ ಏರಿಕೆಯಾಗಿದೆ. 89.70 ರೂ. ಇದ್ದ ಡೀಸೆಲ್ ದರ ರೂ. 90.49ಕ್ಕೆ ಏರಿಕೆಯಾಗಿದೆ.