ಮೂಡಿಗೆರೆ : ಲೋಕಸಭಾ ಚುನಾವಣೆ ಹಿನ್ನೆಲೆ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಪ್ರಮೋದ್ ಮಧ್ವರಾಜ್ ಪರವಾಗಿ ಇಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪ್ರಚಾರ ನಡೆಸಲಿದ್ದು, ಮೂಡಿಗೆರೆ ಹೊಯ್ಸಳ ಕ್ರೀಡಾಂಗಣದಲ್ಲಿ ಮಧ್ಯಾಹ್ನ 4:00 ಕ್ಕೆ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿ ಚುನಾವಣಾ ಪ್ರಚಾರ ಮಾಡಲಿದ್ದಾರೆ ಎಂದು ಜಿಲ್ಲಾ ಜೆಡಿಎಸ್ ಅಧ್ಯಕ್ಷ ರಂಜನ್ ಅಜಿತ್‍ಕುಮಾರ್ ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ಉಸ್ತುವಾರಿ ಸಚಿವ ಕೆ.ಕೆ ಜಾರ್ಜ್, ಉಡುಪಿ ಉಸ್ತುವಾರಿ ಸಚಿವರಾದ ಡಾ. ಜಯಮಾಲಾ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ, ಹಾಗೂ ಧರ್ಮೇಗೌಡ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ, ಮಾಜಿ ಶಾಸಕ ಬಿ.ಬಿ. ನಿಂಗಯ್ಯ, ಮಾಜಿ ಶಾಸಕರಾದ ಮೋಟಮ್ಮ ಹಾಗೂ ಗಾಯತ್ರಿ ಶಾಂತೇಗೌಡ, ಕಮ್ಯುನಿಸ್ಟ್ ಪಕ್ಷದ ಮುಖಂಡರಾದ ರೇಣುಕಾ ರಾಧ್ಯ, ಲೋಕೇಶ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ವಿಜಯ್‍ಕುಮಾರ್, ಚಿಕ್ಕಮಗಳೂರು ಎಪಿಎಂಸಿ ಅಧ್ಯಕ್ಷ ಪ್ರಕಾಶ್ ಅರೇನಹಳ್ಳಿ, ಕಾಂಗ್ರೆಸ್ ಮುಖಂಡರಾದ ಎಂ.ಎಲ್ ಮೂರ್ತಿ, ಎ.ಎನ್. ಮಹೇಶ್, ಪ್ರಭಾಕರ್ ಗೌಡ, ಎಂ.ಎಸ್. ಅನಂತ್, ಜೆಡಿಎಸ್ ಸಮಿತಿ ಅಧ್ಯಕ್ಷರಾದ ಬಿ.ಜಿ.ಸುರೇಶ್ ಹಾಗೂ ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ, ಜೆಡಿಎಸ್ ಮುಖಂಡರುಗಳಾದ ಬಾಲಕೃಷ್ಣ ಗೌಡ, ಡಿ.ಆರ್. ಉಮಾಪತಿ, ಯುವ ಜೆಡಿಎಸ್ ಮುಖಂಡರಾದ ಬಾಳೂರು ಆದರ್ಶ್, ಸಂದೀಪ್, ಕಿಸಾನ್ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಡಿದಾಳು ಬ್ರಿಜೇಶ್ ಸೇರಿದಂತೆ ಹಲವು ಪ್ರಮುಖ ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕಾಗಿ ವಿನಂತಿಸಿಕೊಂಡಿದ್ದಾರೆ.










