ನವದೆಹಲಿ : ವಿಜಯದಶಮಿ ಹಬ್ಬದ ಹಿನ್ನೆಲೆಯಲ್ಲಿ ದೇಶದ ಜನತೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, ವಿಜಯದಶಮಿ ಹಬ್ಬದ ವಿಶೇಷ ಸಂದರ್ಭದಲ್ಲಿ ಪ್ರತೀಯೊಬ್ಬರಿಗೂ ಶುಭಾಶಯಗಳನ್ನು ಕೋರುತ್ತಿದ್ದೇನೆಂದು ಹೇಳಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಟ್ವೀಟ್ ಮಾಡಿ, ‘ವಿಜಯ ದಶಮಿಯ ಶುಭ ಸಂದರ್ಭದಲ್ಲಿ ಎಲ್ಲಾ ದೇಶವಾಸಿಗಳಿಗೆ ಶುಭಾಶಯ ತಿಳಿಸುತ್ತೇನೆ. ದಸರಾ ಹಬ್ಬವು ಒಳ್ಳೆಯತನ ಮತ್ತು ಸದ್ಗುಣಗಳ ಹಾದಿಯಲ್ಲಿ ನಡೆಯಲು ನಮಗೆ ಸ್ಫೂರ್ತಿ ನೀಡುತ್ತದೆ. ಈ ಹಬ್ಬವು ಪ್ರತಿಯೊಬ್ಬರ ಜೀವನದಲ್ಲಿ ಸಮೃದ್ಧಿ ಮತ್ತು ಸಂತೋಷ ತರಲಿ ಎಂದು ಹಾರೈಸಿದ್ದಾರೆ.










