ಇಂದು ವಿಶ್ವಾಸಮತ ಸಾಬೀತು ಮಾಡದೇ ಮುಂದೂಡಿದರೆ ಸದನದಿಂದ ನಾನೇ ಹೊರನಡೆಯುತ್ತೇನೆ : ಸಿದ್ದರಾಮಯ್ಯ…

437
firstsuddi

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದು, ವಿಶ್ವಾಸ ಮತಯಾಚನೆ ಹಿನ್ನೆಲೆ ಇವತ್ತೇ ವಿಶ್ವಾಸ ಮತ ಸಾಬೀತುಪಡಿಸೋಣ. ಒಂದು ವೇಳೆ ಇಂದು ವಿಶ್ವಾಸಮತ ಸಾಬೀತು ಮಾಡದೇ ಮುಂದೂಡಿದರೆ ನಾನೇ ಸದನದಿಂದ ಹೊರನಡೆಯುತ್ತೇನೆ ಎಂದು ಡಿಸಿಎಂ ಡಾ.ಜಿ. ಪರಮೇಶ್ವರ್ ಹಾಗೂ ಡಿ.ಕೆ. ಶಿವಕುಮಾರ್ ಅವರ ಮೂಲಕ ಕುಮಾರಸ್ವಾಮಿ ಅವರಿಗೆ ಎಚ್ಚರಿಕೆಯ ಸಂದೇಶವನ್ನು ರವಾನಿಸಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.