ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಯುವತಿ ಹೇಳಿಕೆ ನೀಡಲು ಕೋರ್ಟ್ ಅನುಮತಿ ನೀಡಿದ್ದು, ಸಿಡಿ ಪ್ರಕರಣ ಸಂಬಂಧ ಇಂದು ಮಧ್ಯಾಹ್ನದೊಳಗೆ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶರ ಮುಂದೆ ಯುವತಿ ಹಾಜರಾಗುವ ಸಾಧ್ಯತೆಯಿದೆ ಎನ್ನಲಾಗಿದೆ.
ಸಿಡಿ ಯುವತಿಯ ಹೇಳಿಕೆ ದಾಖಲು ಮಾಡುವ ವೇಳೆ ಕೇವಲ ಮೂರು ಜನರಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಹೇಳಿಕೆ ನೀಡುವ ಯುವತಿ, ಹೇಳಿಕೆ ದಾಖಲಿಸುವ ನ್ಯಾಯಾಧೀಶರು, ಹಾಗೂ ವಿಡಿಯೋ ರೆಕಾರ್ಡಿಂಗ್ ಮಾಡುವ ವ್ಯಕ್ತಿ ಇರಲಿದ್ದು, ಇಂದು ಸಿಡಿ ಯುವತಿ ಕೋರ್ಟ್ ಗೆ ಹಾಜರಾಗ್ತಾರಾ? ಎಂದು ಕಾದು ನೋಡಬೇಕಾಗಿದೆ.










