ಇಂದ್ರಜಿತ್ ಲಂಕೇಶ್ ವಿರುದ್ಧ ಫಿಲ್ಮ್ ಚೇಂಬರ್‍ ಗೆ ಚಿರಂಜೀವಿ ಸರ್ಜಾ ಅವರ ಪತ್ನಿ ನಟಿ ಮೇಘನಾ ರಾಜ್ ದೂರು…

232
firstsuddi

ಬೆಂಗಳೂರು : ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲ ವಿಚಾರಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಇಂದ್ರಜಿತ್ ಲೋಕೇಶ್ ಅವರು ತನ್ನ ಪತಿ ಚಿರಂಜೀವಿ ಸರ್ಜಾ ಅವರ ಹೆಸರು ಬಳಸಿದ್ದು ಬೇಸರವಾಗಿದೆ ಎಂದು ನಟಿ ಮೇಘನಾ ರಾಜ್ ಅವರು ಫಿಲ್ಮ್ ಚೇಂಬರ್‍ ಗೆ ದೂರನ್ನು ಸಲ್ಲಿಸಿದ್ದು, ಇಂದ್ರಜಿತ್ ಲಂಕೇಶ್ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.
ಸ್ಯಾಂಡಲ್‍ವುಡ್ ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಕಳೆದ ಕೆಲವು ದಿನಗಳ ಹಿಂದೆ ನಿರ್ದೇಶಕ ಇಂದ್ರಜೀತ್ ಲಂಕೇಶ್ ಅವರು ಇತ್ತೀಚೆಗೆ ಮೃತಪಟ್ಟ ಯುವ ನಟ ಚಿರಂಜೀವಿ ಸರ್ಜಾ ಅವರ ಮೃತದೇಹವನ್ನು ಮರಣೊತ್ತರ ಪರೀಕ್ಷೆ ಮಾಡಿಸಿದ್ದರೆ ಡ್ರಗ್ಸ್ ನಂಟಿನ ಬಗ್ಗೆ ಮಾಹಿತಿ ಸಿಗುತ್ತಿತ್ತು ಎಂದು ಹೇಳಿಕೆ ನೀಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಬೇಸರ ವ್ಯಕ್ತಪಡಿಸಿರುವ ಚಿರಂಜೀವಿ ಸರ್ಜಾ ಅವರ ಪತ್ನಿ ನಟಿ ಮೇಘನಾ ರಾಜ್ ಅವರು ಇಂದ್ರಜಿತ್ ಅವರ ಹೇಳಿಕೆಯಿಂದ ನಮಗೆ ಬಹಳ ನೋವಾಗಿದೆ. ನನ್ನ ಪತಿ ನಮ್ಮನ್ನು ಅಗಲಿ ಮೂರು ತಿಂಗಳು ಕಳೆದಿಲ್ಲ. ಆಗಲೇ ಪತಿಯ ಮೇಲೆ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ಗರ್ಭಾವತಿ ಆಗಿರುವ ನಾನು ಮಾನಸಿಕವಾಗಿ ಕುಗ್ಗಿದ್ದೇನೆ. ಇಂತಹ ಬೆಳವಣಿಗೆಯಿಂದ ನನಗೂ ನನ್ನ ಕುಟುಂಬಕ್ಕೂ ಬೇಸರವಾಗಿದೆ. ಈ ವಿಚಾರವಾಗಿ ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಫಿಲ್ಮ್ ಚೇಂಬರ್‍ ಗೆ ಪತ್ರ ಬರೆದಿದ್ದಾರೆ.