ಇಡೀ ವಿಶ್ವ ಭಾರತದ ಬಜೆಟ್ ಮೇಲೆ ಕಣ್ಣಿಟ್ಟಿದೆ : ಪ್ರಧಾನಿ ಮೋದಿ

34
firstsuddi

ನವದೆಹಲಿ : ಜಾಗತಿಕ ಅಸ್ಥಿರತೆಯ ನಡುವೆ ಇಡೀ ವಿಶ್ವ ಭಾರತದ ಬಜೆಟ್ ಮೇಲೆ ಕಣ್ಣಿಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಬಜೆಟ್ ಅಧಿವೇಶನ ಆರಂಭಕ್ಕೂ ಮೊದಲು ಸಂಸತ್ ಕಟ್ಟಡದ ಹೊರಗೆ ಮಾತನಾಡಿದ ಅವರು, ನಾಳೆ ಕೇಂದ್ರ ಬಜೆಟ್ ಮಂಡಿಸಲಿರುವ ವಿತ್ತ ಸಚಿವರು ಮಹಿಳೆಯಾಗಿದ್ದು, ಭಾರತ ಮಾತ್ರವಲ್ಲ, ಇಡೀ ವಿಶ್ವವೇ ನಮ್ಮ ಬಜೆಟ್ ಮೇಲೆ ಕಣ್ಣಿಟ್ಟಿದೆ. ನಿರ್ಮಲಾ ಸೀತಾರಾಮನ್ ಅವರು ಎಲ್ಲಾ ನಿರೀಕ್ಷೆಗಳನ್ನು ಪೂರೈಸುತ್ತಾರೆ ಎಂದು ಖಾತ್ರಿಯಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇದೇ ಮೊದಲ ಬಾರಿಗೆ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಬುಡಕಟ್ಟು ಸಮಾಜಕ್ಕೆ ಹೆಮ್ಮೆಯ ದಿನವಾಗಿದೆ. ಸದನದಲ್ಲಿ ಪ್ರತಿ ವಿಷಯದ ಬಗ್ಗೆಯೂ ಉತ್ತಮವಾಗಿ ಚರ್ಚೆ ಮಾಡುತ್ತೇವೆ. ಎಲ್ಲ ಸಂಸದರು ಈ ಅಧಿವೇಶನದಲ್ಲಿ ಸಂಪೂರ್ಣ ಸಿದ್ಧತೆಯೊಂದಿಗೆ ಭಾಗವಹಿಸುತ್ತಾರೆ. ಈ ಅಧಿವೇಶನವು ನಮಗೆಲ್ಲರಿಗೂ ಮಹತ್ವದ್ದಾಗಿದೆ ಎಂದು ತಿಳಿಸಿದರು.