ನವದೆಹಲಿ : ದೇಶದಲ್ಲಿ ಕೊರೊನಾ ಸ್ಫೋಟವಾಗುತ್ತಿದ್ದು, ದಿನದಿಂದ ದಿನಕ್ಕೆ ಹಲವಾರು ಮಂದಿ ಕೊರೊನಾಗೆ ಬಲಿಯಾಗುತ್ತಿದ್ದಾರೆ. ಹೀಗಿರುವಾಗ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಇನ್ನಾದರೂ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕು ಎಂದಿದ್ದಾರೆ.
ಈ ಕುರಿತು ಟ್ವೀಟರ್ನಲ್ಲಿ ವಿಡಿಯೋ ಶೇರ್ ಮಾಡಿರುವ ಸೋನಿಯಾ ಗಾಂಧಿ ಅವರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಚ್ಚೆತ್ತುಕೊಂಡು ತಮ್ಮ ಕರ್ತವ್ಯ ನಿರ್ವಹಿಸಬೇಕಾಗಿದೆ. ದೇಶದ ಎಲ್ಲರಿಗೂ ಉಚಿತವಾಗಿ ಕೊರೊನಾ ವ್ಯಾಕ್ಸಿನ್ ನೀಡಬೇಕು. ಅಲ್ಲದೇ ಪರವಾನಗಿ ನೀಡಿ ಹೆಚ್ಚುವರಿ ಉತ್ಪಾದನಾ ಕೇಂದ್ರಗಳನ್ನು ತೆರೆಯಲು ಅವಕಾಶ ನೀಡಬೇಕು ಎಂದರು.
ಕೊರೊನಾ ವಿರುದ್ಧ ಹೋರಾಡಲು ರಾಷ್ಟ್ರೀಯ ನೀತಿಯನ್ನು ರೂಪಿಸಬೇಕು. ಸದ್ಯದ ಪರಿಸ್ಥಿತಿಯಲ್ಲಿ ಬಡವರ ಕುಟುಂಬಗಳಿಗೆ ಕೇಂದ್ರ ಸರ್ಕಾರ ತಲಾ 6 ಸಾವಿರ ರೂ. ನೀಡಬೇಕು. ಕಾಳಸಂತೆಯಲ್ಲಿ ಕೋವಿಡ್ ಔಷಧ ಮಾರಾಟವಾಗುವುದನ್ನ ತಡೆಯಬೇಕು. ಇಂತಹ ಕಷ್ಟದ ಸಮಯದಲ್ಲಿ ಕಾಂಗ್ರೆಸ್ ಕೂಡ ಸರ್ಕಾರದ ಜೊತೆ ನಿಲ್ಲಲಿದೆ ಎಂದು ತಿಳಿಸಿದ್ದಾರೆ.
कोरोना महामारी के इस चुनौतीपूर्ण समय में आपके व आपके परिवार की सुरक्षा और अच्छे स्वास्थ्य की कामना करती हूं। वह लाखों परिवार जिन्होंने अपने परिजनों को खोया है, उनके प्रति दिल से अपनी संवेदना व्यक्त करती हूं।
– कांग्रेस अध्यक्षा, श्रीमती सोनिया गांधी#COVID19India pic.twitter.com/btmCeG8K6B
— Congress (@INCIndia) May 1, 2021










