ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಮುಂದುವರೆಯಲಿದೆ ಮಳೆ…

75
firstsuddi

ಬೆಂಗಳೂರು :  ರಾಜ್ಯದ ಹಲವೆಡೆ ಸುರಿಯುತ್ತಿರುವ ಮಳೆ ಇನ್ನೂ ನಾಲ್ಕು ದಿನ ಮುಂದುವರಿಯಲಿದೆ. ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಏಕಕಾಲದಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಇಂದಿನಿಂದ ನಾಲ್ಕು ದಿನ ಕರ್ನಾಟಕದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನದಲ್ಲಿ ಇಂದಿನಿಂದ ಏಪ್ರಿಲ್ 24ರವರೆಗೆ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಏಪ್ರಿಲ್ 22 ರಿಂದ 24ರವರೆಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.