ಇಬ್ಬರು ಮಕ್ಕಳಿಗೆ ವಿಷ ನೀಡಿ ದಂಪತಿ ಆತ್ಮಹತ್ಯೆಗೆ ಶರಣು…

233
firstsuddi

ಬೆಳಗಾವಿ: ತಮ್ಮ ಇಬ್ಬರು ಮಕ್ಕಳಿಗೆ ವಿಷ ನೀಡಿ ಬಳಿಕ ದಂಪತಿಯೂ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ರಾಮದುರ್ಗದಲ್ಲಿ ನಡೆದಿದೆ. ಮೃತರನ್ನು ಪ್ರವೀಣ ರಮೇಶ್ ಶೆಟ್ಟರ್, ರಾಜೇಶ್ವರಿ , ಅಮೃತ(8) ಹಾಗೂ ಅದ್ವಿಕ್(6) ಎಂದೂ ಗುರುತಿಸಲಾಗಿದೆ. ಮೃತ ಪ್ರವೀಣ ರಮೇಶ್ ಶೆಟ್ಟರ್ ಅವರು ನಗರದಲ್ಲಿ ಗೊಬ್ಬರದ ಅಂಗಡಿ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ಆದರೆ ಏಕಾಏಕಿ ತಮ್ಮ ಇಬ್ಬರು ಮಕ್ಕಳಿಗೆ ವಿಷ ನೀಡಿ ಬಳಿಕ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ರಾಮದುರ್ಗ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.