ಚಿಕ್ಕಬಳ್ಳಾಪುರ: ಮಹಿಳೆಯೊಬ್ಬಳು ತನ್ನ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಬಾವಿಗೆ ಹಾರಿದ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ.
ಘಟನೆಯಲ್ಲಿ ಓರ್ವ ಮಗಳು ಶ್ರೀನಿಧಿ (5) ಹಾಗೂ ತಾಯಿ ನಾಗಮ್ಮ (38) ಮೃತಪಟ್ಟಿದ್ದಾರೆ. 7 ವರ್ಷದ ಮಗಳು ಗಂಗೋತ್ರಿ ಬಾವಿಯಿಂದ ಈಜಿ ಮೇಲೆ ಬಂದು, ಪ್ರಾಣಾಪಾಯದಿಂದ ಪಾರಾಗಿದ್ದಾಳೆ.
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮನನೊಂದಿದ್ದ ಆಕೆ ತನ್ನ ಇಬ್ಬರು ಮಕ್ಕಳನ್ನು ಕರೆದುಕೊಂಡು ತಾಲೂಕಿನ ಸೇಟ್ ದಿನ್ನೆ ಬಳಿ ತೆರಳಿದ್ದು, ಅಲ್ಲಿನ ಬಾವಿಗೆ ಹಾರಿದ್ದಾರೆ.
ಇನ್ನು ಬಾವಿಯಿಂದ ಮೇಲೆ ಬಂದ ಕೂಡಲೇ ಗಂಗೋತ್ರಿ ಗ್ರಾಮದಲ್ಲಿ ವಿಚಾರ ತಿಳಿಸಿದ್ದಾಳೆ. ಬಳಿಕ ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಾಯಿ ಶವವನ್ನು ಮೇಲೆತ್ತಿದ್ದು, ಬಾಲಕಿ ಶವಕ್ಕಾಗಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಘಟನೆ ಕುರಿತು ಚಿಕ್ಕಬಳ್ಳಾಫುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.










