ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ ಪ್ರಾರಂಭ…

60
firstsuddi

ನವದೆಹಲಿ: ಇಸ್ರೇಲ್-ಹಮಾಸ್ ಯುದ್ಧದ ನಡುವೆ ಸಿಲುಕಿರುವ ಭಾರತೀಯರನ್ನು ಕರೆತರಲು ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಲಾಗಿದೆ.

ಚಾರ್ಟರ್ಡ್ ವಿಮಾನದ ಮೂಲಕ ಭಾರತಕ್ಕೆ ಮರಳಲು ಇಚ್ಚಿಸುವ ಭಾರತೀಯರನ್ನು ಅತ್ಯಂತ ಸುರಕ್ಷಿತವಾಗಿ ತವರಿಗೆ ಕರೆತರಲಾಗುತ್ತದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.

ಇಸ್ರೇಲ್‌ನಲ್ಲಿ ಸಿಲುಕಿರುವ ಹಲವು ಭಾರತೀಯರು ಈಗಾಗಲೇ ರಾಯಭಾರ ಕಚೇರಿ ವೆಬ್‌ಸೈಟ್ ಮೂಲಕ ನೋಂದಣಿ ಮಾಡಿದ್ದಾರೆ. ಭಾರತಕ್ಕೆ ಮರಳಲು ಇಚ್ಚಿಸುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲಾಗುತ್ತದೆ ಎಂದು ಜೈಶಂಕರ್ ಹೇಳಿದ್ದಾರೆ. ಮೊದಲ ಬ್ಯಾಚ್ ಇಂದು ಇಸ್ರೇಲ್‌ನಿಂದ ಹೊರಡಲಿದೆ. ತವರಿಗೆ ಮರಳಲು ವಿಶೇಷ ವಿಮಾನ ವ್ಯವಸ್ಥೆ ಮಾಡಲಾಗಿದೆ. ಇಸ್ರೇಲ್‌ನ ಭಾರತೀಯ ರಾಯಭಾರ ಕಚೇರಿ ಎಲ್ಲಾ ವ್ಯವಸ್ಥೆ ಮಾಡಿದ್ದು, ಇಂದಿನಿಂದ ತಾಯ್ನಾಡಿಗೆ ಹಂತ ಹಂತವಾಗಿ ಭಾರತೀಯರು ಮರಳಲಿದ್ದಾರೆ.

ಇಸ್ರೇಲ್ ಮೇಲೆ ಹಮಾಸ್ ಉಗ್ರರು ದಾಳಿ ನಡೆಸಿದ ಬಳಿಕ ಎರಡೂ ಪ್ರದೇಶಗಳಲ್ಲಿ ಯುದ್ಧದ ಸ್ಥಿತಿ ತೀವ್ರಗೊಂಡಿದೆ. ಸಾವಿನ ಸಂಖ್ಯೆ 4,000ಕ್ಕೆ ಹತ್ತಿರವಾಗುತ್ತಿದ್ದಂತೆ ಭಾರತೀಯ ನಾಗರಿಕರನ್ನು ಇಸ್ರೇಲ್‌ನಿಂದ ಏರ್‌ಲಿಫ್ಟ್ ಮಾಡಲು ಭಾರತ, ಆಪರೇಷನ್ ಅಜಯ್ ಅನ್ನು ಪ್ರಾರಂಭಿಸಿದೆ.