ಇಸ್ರೋದಿಂದ ಮತ್ತೊಂದು ಸಾಧನೆ: ಅಂತರಿಕ್ಷದಲ್ಲಿ ಎರಡು ಉಪಗ್ರಹಗಳ ಜೋಡಣೆ ಕಾರ್ಯ ಯಶಸ್ವಿ.

63

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಇಂದು ಮತ್ತೊಮ್ಮೆ ಇತಿಹಾಸ ಸೃಷ್ಟಿಸಿದೆ. ಸ್ಪಾಡೆಕ್ಸ್ ಮಿಷನ್ ಅಡಿಯಲ್ಲಿ 2 ಉಪಗ್ರಹಗಳನ್ನು ಡಾಕಿಂಗ್ ಮಾಡುವ ಪ್ರಕ್ರಿಯೆಯನ್ನು ಇಸ್ರೋ ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಅಮೆರಿಕ, ರಷ್ಯಾ ಮತ್ತು ಚೀನಾ ಬಳಿಕ, ಭಾರತ ಈ ಸಾಧನೆ ಮಾಡಿದ 4ನೇ ರಾಷ್ಟ್ರವಾಗಿದೆ. ಇದೊಂದು ಐತಿಹಾಸಿಕ ಕ್ಷಣವಾಗಿದೆ. ಭಾರತವು ಬಾಹ್ಯಾಕಾಶ ಇತಿಹಾಸದಲ್ಲಿ ತನ್ನ ಹೆಸರನ್ನು ದಾಖಲಿಸಿದೆ. ಡಾಕಿಂಗ್ ಪ್ರಕ್ರಿಯೆ ಯಶಸ್ವಿಯಾಗಿದೆ. ಸ್ಪೇಸ್ ಕ್ರಾಫ್ಟ್ ಡಾಕಿಂಗ್ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಈ ಕ್ಷಣಕ್ಕೆ ಸಾಕ್ಷಿಯಾಗಲು ಹೆಮ್ಮೆಪಡುತ್ತೇವೆ. ಯಶಸ್ವಿ ಬಾಹ್ಯಾಕಾಶ ಡಾಕಿಂಗ್ ಸಾಧಿಸಿದ ನಾಲ್ಕನೇ ರಾಷ್ಟ್ರ ಭಾರತವಾಗಿದೆ. ಇಡೀ ತಂಡಕ್ಕೆ ಮತ್ತು ಭಾರತಕ್ಕೆ ಅಭಿನಂದನೆಗಳು ಎಂದು ಇಸ್ರೋ ಎಕ್ಸ್ ಪೋಸ್ಟ್ ಮೂಲಕ ತಿಳಿಸಿದೆ. ಡಾಕಿಂಗ್ ಬಳಿಕ 2 ಉಪಗ್ರಹಗಳನ್ನು ಒಂದೇ ವಸ್ತುವಾಗಿ ನಿಯಂತ್ರಿಸುವುದು ಯಶಸ್ವಿಯಾಗಿದೆ. ಮುಂದಿನ ದಿನಗಳಲ್ಲಿ ಅನ್‍ಡಾಕಿಂಗ್ ಪ್ರಕ್ರಿಯೆ ಮತ್ತು ವಿದ್ಯುತ್ ಟ್ರಾನ್ಸ್‍ಪರ್ ಪರಿಶೀಲನೆಗಳು ನಡೆಯಲಿವೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಪೋಸ್ಟ್ ಮೂಲಕ ತಿಳಿಸಿದೆ.