ಈ ಬಾರಿ ಜನವಿರೋಧಿ ಬಿಜೆಪಿ ಸರ್ಕಾರ ಹೋಗಿ ಜನಪರ ಕಾಂಗ್ರೆಸ್ ಸರ್ಕಾರ ಬರುವುದು ಶತಸಿದ್ಧ : ಸಿದ್ದರಾಮಯ್ಯ…

431
firstsuddi

ಬೆಂಗಳೂರು : ರಾಯಚೂರಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶವನ್ನು ಉದ್ದೇಶಿಸಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ. ರಾಯಚೂರಿನಲ್ಲಿ ಆಯೋಜಿಸಿದ್ದ ಕಾಂಗ್ರೆಸ್ ಪಕ್ಷದ ಬೃಹತ್ ಸಮಾವೇಶದಲ್ಲಿ ರಾಹುಲ್ ಗಾಂಧಿಯವರೊಂದಿಗೆ ಭಾಗವಹಿಸಿದ ಕ್ಷಣ. ನಮ್ಮ ಪಕ್ಷದ ಕಾರ್ಯಕ್ರಮಗಳಿಗೆ ಹರಿದು ಬರುತ್ತಿರುವ ಜನಸಾಗರವೇ ನರೇಂದ್ರ ಮೋದಿಯವರ ಸರ್ಕಾರದ ವೈಫಲ್ಯಗಳನ್ನು ಸಾರಿ ಹೇಳುತ್ತಿದೆ. ಈ ಬಾರಿ ಜನವಿರೋಧಿ ಬಿಜೆಪಿ ಸರ್ಕಾರ ಹೋಗಿ ಜನಪರ ಕಾಂಗ್ರೆಸ್ ಸರ್ಕಾರ ಬರುವುದು ಶತಸಿದ್ಧ ಎಂದು ಟ್ವೀಟ್ ಮಾಡಿದ್ದಾರೆ.