ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಕ್ಕೆ ರಮ್ಯಾ ವಿರುದ್ಧ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಹಮ್ಮದ್ ನಲಪಾಡ್ ಹರಿಹಾಯ್ದಿದ್ದರು. ಇದೀಗ ಟ್ವೀಟ್ ಮೂಲಕ ಕಾಂಗ್ರೆಸ್ ಮಾಜಿ ಸಂಸದೆ ಹಾಗೂ ನಟಿ ರಮ್ಯಾ ತಿರುಗೇಟು ನೀಡಿದ್ದಾರೆ.
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದ ಮೊಹಮ್ಮದ್ ನಲಪಾಡ್ ಮೇಲಿರುವ ಆರೋಪದ ಸುದ್ದಿಗಳ ಫೋಟೋಗಳನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿರುವ ರಮ್ಯಾ, ಈ ಹುಡುಗ ನಲಪಾಡ್ ಗೌರವಾನ್ವಿತ ಕಾಂಗ್ರೆಸ್ ಶಾಸಕ ಹ್ಯಾರಿಸ್ ಪುತ್ರ. ಯುವ ಕಾಂಗ್ರೆಸ್ ಅಧ್ಯಕ್ಷನಾಗಿದ್ದು (ಜಾಮೀನಿನ ಮೇಲೆ) ನನ್ನ ಪ್ರಾಮಾಣಿಕತೆಯನ್ನೇ ಪ್ರಶ್ನಿಸುತ್ತಿದ್ದಾನೆ. ವಾಹ್! ಎಂದು ಗರಂ ಆಗಿದ್ದಾರೆ.
ರಮ್ಯಾ ಇಷ್ಟು ದಿನ ಎಲ್ಲಿದ್ದರೂ ಅಂತ ನನಗೂ ಗೊತ್ತಿಲ್ಲ. ಇಷ್ಟು ತಿಂಗಳು ಇಷ್ಟು ವರ್ಷ ರಮ್ಯಾ ಎಲ್ಲಿದ್ದರು? ಎಲ್ಲಿಯೂ ಇಲ್ಲದ ರಮ್ಯಾ ಹಠಾತ್ ಯಾಕೆ ಬಂದರು? ಯಾವ ಕುರ್ಚಿಯ ಮೇಲೆ ಟವಲ್ ಹಾಕಲು ರಮ್ಯಾ ಬಂದಿದ್ದಾರೆ ಎಂದು ಮೊಹಮ್ಮದ್ ನಲಪಾಡ್ ಉಡುಪಿಯಲ್ಲಿ ಹೇಳಿಕೆ ನೀಡಿದ್ದರು.










