ಈಗಿನ ಎಜುಕೇಶನ್ ಸಿಸ್ಟಂ ಇದ್ದರೂ ಇಲ್ಲದಂತಾಗಿದೆ – ವೀಡಿಯೋ ಮಾಡಿ ವಿದ್ಯಾರ್ಥಿ ಆತ್ಮಹತ್ಯೆ…

71
firstsuddi

ಹಾಸನ : ಈಗಿನ ಎಜುಕೇಶನ್ ಸಿಸ್ಟಂ ಇದ್ದರೂ ಇಲ್ಲದಂತಾಗಿದೆ. ಶಿಕ್ಷಣ ವ್ಯವಸ್ಥೆ ಬದಲಾವಣೆ ಆಗದಿದ್ದರೆ ಸಾಧನೆ ಸಾಧ್ಯವಿಲ್ಲ. ಶಿಕ್ಷಣ ವ್ಯವಸ್ಥೆ ಬದಲಾವಣೆಗೆ ನನ್ನ ಬಲಿದಾನ ದಾರಿ ದೀಪವಾಗಲಿ ಎಂದು ಸಾಯುವ ಮುನ್ನಾ ವಿಡಿಯೋ ಮಾಡಿಟ್ಟು ವಿದ್ಯಾರ್ಥಿಯೋರ್ವ
ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ

ಹೇಮಂತ್ ಗೌಡ(20) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಈತ ಅರಸೀಕೆರೆ ತಾಲ್ಲೂಕಿನ ಹಿರಿಯಾಳು ನಿವಾಸಿಯಾಗಿದ್ದಾನೆ. ನಗರದ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್ ಓದುತ್ತಿದ್ದ ಈತ, ನಿನ್ನೆ ಹಾಸ್ಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಹೇಮಂತ್ ಗೌಡ ಸಾಯುವ ಮುನ್ನ ಸುಮಾರು 13 ನಿಮಿಷ ಸೆಲ್ಫಿ ವೀಡಿಯೋ ಮಾಡಿದ್ದಾನೆ. ಅದರಲ್ಲಿ ಸಿಎಂ, ವಿಸಿಗಳು, ಎಲ್ಲಾ ಪಕ್ಷದ ದೊಡ್ಡ ದೊಡ್ಡ ಗಣ್ಯಾತಿಗಣ್ಯರು ಈ ಎಜುಕೇಶನ್ ಸಿಸ್ಟಮ್ ಬದಲಾವಣೆಗೆ ಬೆಂಬಲ ಕೊಡಿ. ನನ್ನ ಸುಟ್ಟರೆ ಬೂದಿಯಾಗುತ್ತೆ, ಮಣ್ಣು ಮಾಡಿದರೆ ಕೊಳೆಯುತ್ತದೆ. ಆದ್ದರಿಂದ, ನನ್ನ ಅಂಗಾಂಗಳನ್ನು ದಾನ ಮಾಡಿ. ನನ್ನ ಅಂತ್ಯಕ್ರಿಯೆಯಲ್ಲಿ ಸಿಎಂ, ಶಿಕ್ಷಣ ಸಚಿವರು, ಆದಿ ಚುಂಚನಗಿರಿ ಶ್ರೀಗಳು ಬಾಗಿ ಆಗಬೇಕು. ಅಪ್ಪ ಅಮ್ಮ ಐ ಲವ್ ಯೂ, ನಾನು ನಿಮ್ಮನ್ನ ಮಿಸ್ ಮಾಡಿಕೊಳ್ತೀನಿ. ಈ ವಿಡಿಯೋವನ್ನು ನ್ಯೂಸ್ ಚಾನಲ್ ನಲ್ಲಿ ಪ್ರಸಾರ ಮಾಡಿ. ಎಲ್ಲರೂ ಈ ವಿಡಿಯೋವನ್ನು ನೋಡಲಿ ಎಂದು ಅಂತ ಮನವಿ ಮಾಡಿರುವ ಹೇಮಂತ್ ನ್ಯೂಸ್ ಚಾನಲ್, ಟ್ವಿಟ್ಟರ್, ಫೇಸ್ಬುಕ್, ವ್ಯಾಟ್ಸಪ್ ಎಲ್ಲದರಲ್ಲೂ ಈ ವೀಡಿಯೋ ಅಪ್ ಲೋಡ್ ಮಾಡಿ. ಆತ್ಮಹತ್ಯೆ ಮಾಡಿಕೊಂಡಿದ್ದಾನೆ.