ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು…

68
firstsuddi

ಉಡುಪಿ : ಈಜಲು ಹೋಗಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೆಬ್ರಿ ತಾಲೂಕಿನ ಶಿವಪುರ ಹೊಳೆಯಲ್ಲಿ ನಡೆದಿದೆ.

ಸುದರ್ಶನ್ (16), ಸೋನಿತ್ (17) ಹಾಗೂ ಕಿರಣ್ (6 ) ಮೃತಪಟ್ಟ ವಿದ್ಯಾರ್ಥಿಗಳು. ಹಿರಿಯಡ್ಕ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸ್ಥಳೀಯರು ಮೃತದೇಹಗಳನ್ನು ಹೊರತೆಗೆದಿದ್ದಾರೆ.

ಹೆಬ್ರಿ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.