ಈಜು ಬಾರದೆ ಕಾಲುವೆಯಲ್ಲಿ ಮುಳುಗಿ ವೈದ್ಯಕೀಯ ವಿದ್ಯಾರ್ಥಿ ಸಾವು…

49
firstsuddi

ಮೈಸೂರು: ಈಜು ಬಾರದೆ ಕಾಲುವೆಯಲ್ಲಿ ಮುಳುಗಿ ವೈದ್ಯಕೀಯ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಬಿದರಹಳ್ಳಿ ಗ್ರಾಮದ ಬಳಿ ನಡೆದಿದೆ.

ಬೆಂಗಳೂರಿನ ನಿವಾಸಿ ಶೈಲೇಂದ್ರ ಎಂಬುವರ ಪುತ್ರ ಕಿಶನ್ (21) ಮೃತ ವೈದ್ಯಕೀಯ ವಿದ್ಯಾರ್ಥಿ. ಮೃತ ಕಿಶನ್ ಬೆಂಗಳೂರಿನ ಅಂಬೇಡ್ಕರ್ ವೈದ್ಯಕೀಯ ಕಾಲೇಜಿನ ಮೆಡಿಕಲ್ ವಿದ್ಯಾರ್ಥಿಯಾಗಿದ್ದನು.

ಸರಗೂರಿನ ವಿವೇಕಾನಂದ ಸ್ಮಾರಕ ಆಸ್ಪತ್ರೆಗೆ ತರಬೇತಿಗಾಗಿ ಐವರು ವಿದ್ಯಾರ್ಥಿಗಳು ಆಗಮಿಸಿದ್ದರು. ನಿನ್ನೆ ಬೀಚನಹಳ್ಳಿ ಎಡದಂಡೆ ನಾಲೆಗೆ ನೀರಿನಲ್ಲಿ ಈಜಲು ತೆರಳಿದ್ದರು. ಈ ವೇಳೆ ಈಜಲು ಬಾರದ ಕಿಶನ್ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಘಟನೆ ಸಂಬಂಧ ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.