ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಈದ್-ಮಿಲಾದ್ ಶುಭಾಶಯಗಳನ್ನು ಕೋರಿದ್ದಾರೆ.
ಈದ್-ಉಲ್-ಫಿತರ್ ಶುಭಾಶಯಗಳು. ನಮ್ಮ ಸಮಾಜದಲ್ಲಿ ಸೌಹಾರ್ದತೆ ಮತ್ತು ಸಹಾನುಭೂತಿಯ ಮನೋಭಾವ ಹೆಚ್ಚಲಿ. ಪ್ರತಿಯೊಬ್ಬರ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮಕ್ಕಾಗಿ ನಾನು ಪ್ರಾರ್ಥಿಸುತ್ತೇನೆ. ಈದ್ ಮುಬಾರಕ್ ಎಂದು ಪ್ರಧಾನ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ಈದ್-ಉಲ್-ಫಿತರ್ ಸಂದರ್ಭದಲ್ಲಿ ನಾನು ಎಲ್ಲಾ ದೇಶವಾಸಿಗಳಿಗೆ ವಿಶೇಷವಾಗಿ ನಮ್ಮ ಮುಸ್ಲಿಂ ಸಹೋದರ ಸಹೋದರಿಯರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಪ್ರೀತಿ ಮತ್ತು ದಯೆಯ ಹಬ್ಬವಾಗಿರುವ ಈದ್ ನಮಗೆ ಇತರರಿಗೆ ಸಹಾಯ ಮಾಡುವ ಸಂದೇಶವನ್ನು ನೀಡುತ್ತದೆ. ಈ ಸಂದರ್ಭದಲ್ಲಿ ನಾವು ಒಟ್ಟಾಗಿ ಮುನ್ನಡೆಯುವ ಸಂಕಲ್ಪವನ್ನು ತೆಗೆದುಕೊಳ್ಳೋಣ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಟ್ವೀಟ್ ಮಾಡಿದ್ದಾರೆ.










