ಈದ್ಗಾ ಮೈದಾನದ ಗಣೇಶೋತ್ಸವ ವಿಚಾರ – ತ್ರಿಸದಸ್ಯ ಪೀಠದಿಂದ ವಿಚಾರಣೆ…

53
firstsuddi

ನವದೆಹಲಿ : ಚಾಮರಾಜಪೇಟೆ ಈದ್ಗಾ ಮೈದಾನದ ಗಣೇಶೋತ್ಸವ ಪ್ರಕರಣವನ್ನು ಸುಪ್ರೀಂ ಕೋರ್ಟ್ ಮುಖ್ಯ ತ್ರಿಸದಸ್ಯರ ಪೀಠಕ್ಕೆ ವರ್ಗಾವಣೆ ಮಾಡಿದೆ.

ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಕರ್ನಾಟಕ ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮುಸ್ಲಿಂ ವಕ್ಫ್ ಬೋರ್ಡ್ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿತ್ತು. ಇಂದು ನ್ಯಾ. ಹೇಮಂತ್ ಗುಪ್ತಾ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ಪ್ರಕರಣ ಸಂಬಂಧ ಇಬ್ಬರು ನ್ಯಾಯಮೂರ್ತಿಗಳ ನಡುವೆ ಒಮ್ಮತ ಮೂಡದ ಕಾರಣ ಮೂವರು ಸದಸ್ಯರಿದ್ದ ಬೇರೊಂದು ಪೀಠಕ್ಕೆ ವಿಚಾರಣೆ ವರ್ಗಾವಣೆಗೊಂಡಿದೆ.

ಈ ಹಿನ್ನೆಲೆಯಲ್ಲಿ ಈ ಪ್ರಕರಣ ಸುಪ್ರೀಂ ಕೋರ್ಟ್ ನ್ಯಾ.ಇಂದಿರಾ ಬ್ಯಾನರ್ಜಿ, ನ್ಯಾ. ಎಎಸ್ ಒಕಾ, ನ್ಯಾ. ಎಂಎಂ ಸುಂದರೇಶ್ ಅವರ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ.