ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಇಂದು ರಾತ್ರಿಯಿಂದಲೇ ಅಹೋರಾತ್ರಿ ಧರಣಿ : ಸಿದ್ದರಾಮಯ್ಯ.

98
firstsuddi

ಬೆಂಗಳೂರು : ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದಲೇ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ. ಸಚಿವ ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನಿಸಿದ್ದಾರೆ. ಇದಕ್ಕೆ ತಾರ್ಕಿಕ ಅಂತ್ಯ ಕಾಣಿಸಿಯೇ ತೀರುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪರನ್ನು ಅಮಾನತು ಮಾಡುವಂತೆ ಒತ್ತಾಯಿಸಿದ್ದೇವೆ. ಅವರು ನಮ್ಮ ಸಂವಿಧಾನಕ್ಕೆ ಅಗೌರವ ತೋರಿದ್ದಾರೆ. ರಾಜ್ಯಪಾಲರು ಡಿಸ್ಮಿಸ್ ಮಾಡೋಕೆ ಹೇಳಬೇಕಿತ್ತು. ಸಿಎಂ ಕೂಡ ಮಾಡಬೇಕಿತ್ತು. ರಾಷ್ಟ್ರಧ್ವಜ ನಮ್ಮ ಸ್ವಾತಂತ್ರ್ಯದ ಸಂಕೇತ. ಯಾರೇ ಧ್ವಜದ ಬಗ್ಗೆ ಅಪಮಾನ ಮಾಡಿದ್ರೂ ದೇಶದ್ರೋಹದ ಕೇಸ್ ದಾಖಲಿಸಬೇಕು. ಅವರ ಮೇಲೆ ಕೇಸ್ ದಾಖಲಿಸಿಲ್ಲ ಎಂದು ದೂರಿದರು.

ಮಧ್ಯಪ್ರದೇಶದ ಕಚೇರಿಯಲ್ಲಿ ರಾಷ್ಟ್ರ ಧ್ವಜದ ಮೇಲೆ ಬಿಜೆಪಿ ಬಾವುಟವನ್ನು ಹಾರಿಸ್ತಾರೆ. ಹಾಗಾಗಿ ನಾವು ಪ್ರತಿಭಟನೆ ನಡೆಸಿದ್ದೇವೆ. ಒಬ್ಬ ಸಚಿವರಾಗಿ ಈಶ್ವರಪ್ಪ ಹೇಳುವುದು ಅಪರಾಧ. ಬಿಜೆಪಿ ರಾಷ್ಟ್ರಧ್ವಜಕ್ಕೆ ಗೌರವ ಕೊಡಲ್ಲ. ಹೀಗಾಗಿಯೇ ಆಹೋರಾತ್ರಿ ಧರಣಿ ಮಾಡ್ತೇವೆ ಎಂದರು.