ಬೆಂಗಳೂರು : ನವೀನ್ ಮೃತದೇಹ ಸಿಕ್ಕಿದೆ, ಉಕ್ರೇನಿನ ಶವಾಗಾರದಲ್ಲಿ ಮೃತದೇಹ ಇರಿಸಲಾಗಿದ್ದು, ರಾಜ್ಯಕ್ಕೆ ತರಲು ಎಲ್ಲ ರೀತಿಯ ಪ್ರಯತ್ನ ಪ್ರಯತ್ನ ಮುಂದುವರೆಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವೀನ್ ವಿಚಾರದಲ್ಲಿ ವಿದೇಶಾಂಗ ವ್ಯವಹಾರ ಸಚಿವ ಜೈಶಂಕರ್ ಅವರ ಜತೆ ಮಾತಾಡಿದ್ದೇನೆ. ಅಲ್ಲಿ ಯುದ್ಧ ಇನ್ನೂ ನಡೀತಿದೆ. ರಾಯಭಾರಿ ಕಚೇರಿ ಅಧಿಕಾರಿಗಳ ಜತೆ ಸಂಪರ್ಕದಲ್ಲಿದ್ದೇವೆ, ಮೃತದೇಹ ತರುವ ಬಗ್ಗೆ ಮಾತುಕತೆ ನಡೆಸುತ್ತೇವೆ ಎಂದರು.
ಐದು ರಾಜ್ಯಗಳ ಚುನಾವಣಾ ಸಮಿಕ್ಷೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಸಿಎಂ, ಪಂಚ ರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಜಯಗಳಿಸುವುದು ಚುನಾವಣೆ ವೇಳೆಯೇ ನಿರೀಕ್ಷೆ ಇತ್ತು. ಆ ನಿರೀಕ್ಷೆಗೆ ತಕ್ಕಂತೆ ಚುನಾವಣಾ ಸಮಿಕ್ಷೆಗಳು ಎಕ್ಸಿಟ್ ಪೋಲ ಸಹ ಬಂದಿದೆ. ಇನ್ನೂ ಎರಡು ದಿನ ಕಾದು ನೋಡೋಣ ಎಂದರು.










