ಉಕ್ರೇನ್‍ನಿಂದ ಬಾಂಗ್ಲಾ ವಿದ್ಯಾರ್ಥಿಗಳ ರಕ್ಷಣೆ – ಪ್ರಧಾನಿಗೆ ಧನ್ಯವಾದ ಹೇಳಿದ ಶೇಕ್ ಹಸೀನಾ.

73
firstsuddi

ಡಾಕಾ : ಉಕ್ರೇನ್ ನಲ್ಲಿ ಸಿಲುಕಿಕೊಂಡಿದ್ದ ಭಾರತೀಯ ವಿದ್ಯಾರ್ಥಿಗಳ ಜೊತೆಗೆ ಬಾಂಗ್ಲಾದೇಶದ ವಿದ್ಯಾರ್ಥಿಗಳನ್ನ ರಕ್ಷಣೆ ಮಾಡಿದ್ದಕ್ಕೆ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

ಭಾರತ ಆಪರೇಷನ್ ಗಂಗಾ ಯೋಜನೆ ಅಡಿಯಲ್ಲಿ ರಕ್ಷಣಾ ಕಾರ್ಯಚರಣೆ ಮಾಡುತ್ತಿದ್ದು, ಇಲ್ಲಿಯವರೆಗೆ 15 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳನ್ನ ಸುರಕ್ಷಿತವಾಗಿ ಕರೆತಂದಿದೆ. ಇದೇ ಕಾರ್ಯಾಚರಣೆ ಮೂಲಕ 9 ಬಾಂಗ್ಲಾದೇಶದ ವಿದ್ಯಾರ್ಥಿಗಳನ್ನು ಹಾಗೂ ನೇಪಾಳದ ವಿದ್ಯಾರ್ಥಿಗಳನ್ನೂ ಸುರಕ್ಷಿತವಾಗಿ ಸ್ಥಳಾಂತರಿಸಿದೆ. ಇದೀಗ ಭಾರತೀಯರೊಂದಿಗೆ ಬಾಂಗ್ಲಾದೇಶದ ವಿದ್ಯಾರ್ಥಿಗಳನ್ನೂ ಸ್ಥಳಾಂತರಿಸಿದ್ದಕ್ಕೆ ಶೇಕ್ ಹಸೀನಾ ಮೋದಿಗೆ ಧನ್ಯವಾದ ತಿಳಿಸಿದ್ದಾರೆ.