ಉಗ್ರರು-ಯೋಧರ ನಡುವೆ ಗುಂಡಿನ ದಾಳಿ: ಮೂವರು ಯೋಧರು ಹುತಾತ್ಮ, ಮೂವರು ಉಗ್ರರ ಹತ್ಯೆ…

226
firstsuddi

ಶ್ರೀನಗರ : ಉಗ್ರರು ಹಾಗೂ ಯೋಧರ ನಡುವೆ ನಡೆದ ಗುಂಡಿನ ದಾಳಿಯಲ್ಲಿ ಮೂವರು ಯೋಧರು ಹಾಗೂ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದು, ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಜಮ್ಮು ಕಾಶ್ಮೀರಾದ ಮಚಿಲ್ ಸೆಕ್ಟರ್ ನ ಪಿಒಕೆ ಬಳಿ ಉಗ್ರರು ಒಳ ನುಸುಳುತ್ತಿದ್ದನ್ನು ಗಮನಿಸಿದ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರು ಹಾಗೂ ಯೋಧರ ನಡುವೆ ಭೀಕರ ಗುಂಡಿನ ದಾಳಿ ಸಂಭವಿಸಿದ್ದು, ಈ ದಾಳಿಯಲ್ಲಿ ಭಾರತೀಯ ಸೇನೆಯ ಮೂವರು ಯೋಧರು ಹಾಗೂ ಸೇನಾಧಿಕಾರಿಯೊಬ್ಬರು ಹುತಾತ್ಮರಾಗಿದ್ದು, ಈ ವೇಳೆ ಭದ್ರತಾ ಪಡೆಗಳ ಗುಂಡಿನ ದಾಳಿಗೆ ಮೂವರು ಉಗ್ರರು ಬಲಿಯಾಗಿದ್ದಾರೆ.