ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ವೇಳೆ ಉಗ್ರರ ಗುಂಡಿನ ದಾಳಿಗೆ ಇಬ್ಬರು ಯೋಧರು ಗಂಭೀರ ಗಾಯಗೊಂಡಿದ್ದಾರೆ. ದಕ್ಷಿಣ ಕಾಶ್ಮೀರಾದ ಪುಲ್ವಾಮಾ ಜಿಲ್ಲೆಯ ಕಾಕಪುರ ಪ್ರದೇಶದಲ್ಲಿ ಮೂವರು ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿಯನ್ನು ತಿಳಿದ ಸಿ.ಆರ್.ಪಿ.ಎಫ್, 50 ಆರ್‍ಆರ್ ಹಾಗೂ ಜಮ್ಮು ಪೊಲೀಸರು ಸೇರಿ ಜಂಟಿ ಕಾರ್ಯಾಚರಣೆಗೆ ಮುಂದಾಗಿದ್ದರು. ಯೋಧರು ಉಗ್ರರು ಇರುವ ಪ್ರದೇಶವನ್ನು ಸುತ್ತುವರೆಯುತ್ತಿದ್ದಂತೆ ಉಗ್ರರು ಏಕಾಏಕಿ ಯೋಧರತ್ತ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಉಗ್ರರ ಗುಂಡಿನ ದಾಳಿಗೆ ಯೋಧರು ಕೂಡಾ ಪ್ರತ್ಯುತ್ತರ ನೀಡುತ್ತಿದ್ದು, ಈ ವೇಳೆ ಇಬ್ಬರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳದಲ್ಲಿ ಇನ್ನು ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.










