ಶ್ರೀನಗರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭದ್ರತಾ ಪಡೆಗಳು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಕಾಶ್ಮೀರಾದ ಅನಂತ್‍ನಾಗ್ ಜಿಲ್ಲೆಯ ಲರ್ನೂ ಪ್ರದೇಶದಲ್ಲಿ ಉಗ್ರರು ಅಡಗಿರುವ ಮಾಹಿ ತಿಳಿದ ಯೋಧರು ಹಾಗೂ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಓರ್ವ ಉಗ್ರನನ್ನು ಹೊಡೆದುರುಳಿಸಿದ್ದಾರೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.










