ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ದಾಳಿ-ಇಬ್ಬರು ಯೋಧರು ಹುತಾತ್ಮ…

224
firstsuddi

ಜಮ್ಮು-ಕಾಶ್ಮೀರ : ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಜಮ್ಮು ಕಾಶ್ಮೀರಾದ ನೌಶೇರಾ ಸೆಕ್ಟರ್‍ನಲ್ಲಿ ಕೆಲ ಉಗ್ರರು ಅಡಗಿ ಕುಳಿತಿರುವ ಖಚಿತ ಮಾಹಿತಿಯನ್ನು ತಿಳಿದು ಉಗ್ರರು ಇರುವ ಸ್ಥಳವನ್ನು ಸುತ್ತವರೆದು ಕಾರ್ಯಾಚರಣೆ ನಡೆಸಿದ್ದು, ಈ ವೇಳೆ ಉಗ್ರರ ಗುಂಡಿನ ದಾಳಿಗೆ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದು, ಕಾರ್ಯಾಚರಣೆ ಮುಂದುವರೆಸಿದ್ದಾರೆ.