ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ದಾಳಿ-ಓರ್ವ ಸಿ.ಆರ್.ಪಿ.ಎಫ್ ಯೋಧನಿಗೆ ಗಾಯ

114
firstsuddi

ಶ್ರೀನಗರ : ಗಡಿಯಲ್ಲಿ ಉಗ್ರರು ನಡೆಸಿದ ಗುಂಡಿನ ದಾಳಿಗೆ ಸಿ.ಆರ್.ಪಿ.ಎಫ್ ಯೋಧರೊಬ್ಬರು ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರಾದ ಪುಲ್ವಾಮಾ ಜಿಲ್ಲೆಯ ಗಂಗೂ ಪ್ರದೇಶದಲ್ಲಿ ಸಿ.ಆರ್.ಪಿ.ಎಫ್ ಯೋಧರು ಹಾಗೂ ಪೊಲೀಸ್ ಸಿಬ್ಬಂಧಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಗ್ರರು ಏಕಾಏಕಿ ಯೋಧರತ್ತ ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಸಿ.ಆರ್.ಪಿ.ಎಫ್ ಯೋಧರೊಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗುತ್ತಿದ್ದು, ಘಟನಾ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.