ಉಗ್ರರು ಹಾಗೂ ಯೋಧರ ನಡುವೆ ಗುಂಡಿನ ಚಕಮಕಿ-ಓರ್ವ ಉಗ್ರ ಹತ…

193
firstsuddi

ಶ್ರೀನಗರ : ಮಹಾಮಾರಿ ಕೊರೊನಾ ಭೀತಿಯಿಂದ ಇಡೀ ದೇಶವೇ ಲಾಕ್‍ಡೌನ್ ಆಗಿದ್ದರೂ ಗಡಿಯಲ್ಲಿ ಉಗ್ರರು ತಮ್ಮ ಭಯೋತ್ಪಾದಕ ಚಟುವಟಿಕೆಗಳನ್ನು ಮುಂದುವರೆಸುತ್ತಲೇ ಇದ್ದಾರೆ. ಜಮ್ಮು ಕಾಶ್ಮೀರಾದ ಶೋಪಿಯಾನ್ ಜಿಲ್ಲೆಯ ಡೈರೂ ಎಂಬಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಭಾರತೀಯ ಸೇನೆ ಓರ್ವ ಉಗ್ರನನ್ನು ಹೊಡೆದುರುಳಿಸಿದೆ. ಉಗ್ರರು ಕಳೆದ ರಾತ್ರಿಯಿಂದ ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು ಗುಂಡಿನ ಚಕಮಕಿ ಆರಂಭಿಸಿದ್ದರು. ಇದಕ್ಕೆ ಪ್ರತಿಯಾಗಿ ದಾಳಿ ನಡೆಸಿದ ಯೋಧರು ಓರ್ವ ಉಗ್ರನನ್ನು ಹೊಡೆದುರುಳಿಸಿದ್ದು, ಕಾರ್ಯಾಚರಣೆ ಮುಂದುವರೆಸಿದ್ದಾರೆ ಎಂದು ಸೇನಾ ಮೂಲಗಳಿಂದ ತಿಳಿದು ಬಂದಿದೆ.