ಮೂಡಿಗೆರೆ : ದೇಶದ ಪ್ರತಿಯೊಬ್ಬ ಪ್ರಜೆಗೂ ಉಚಿತ ಹಾಗೂ ಕಡ್ಡಾಯವಾಗಿ ಕೋವಿಡ್ ಲಸಿಕೆ ನೀಡಬೇಕೆಂದು ಆದೇಶಿಸಿದ ಸರ್ವೋಚ್ಚ ನ್ಯಾಯಾಲಯಕ್ಕೆ ಮೂಡಿಗೆರೆ ತಾಲ್ಲೂಕು ಯೂತ್ ಕಾಂಗ್ರೆಸ್ ಹಾಗೂ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.
ಮೂಡಿಗೆರೆ ಕಾಂಗ್ರೆಸ್ ಕಚೇರಿಯಿಂದ ಲಯನ್ಸ್ ವೃತ್ತದ ವರೆಗೆ ಮೆರವಣಿಗೆ ಹೊರಟ ಕಾಂಗ್ರೆಸ್ ಕಾರ್ಯಕರ್ತರು ಸುಪ್ರಿಂ ಕೋರ್ಟ್ ಗೆ ಜೈಕಾರ ಹಾಕಿ ತುಂಬು ಹೃದಯದ ಅಭಿನಂದನೆ ಸಲ್ಲಿಸಿದರು.
ಇನ್ನೂ ಇದೇ ವೇಳೇ ಪಟ್ಟಣ ಪಂಚಾಯಿತಿ ಸದಸ್ಯ ರಮೇಶ್ ಹೊಸಕೆರೆ, ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಚಿಕ್ಕಳ್ಳ ಶಂಕರ್, ಸಂಪತ್ ಬಿಳಗುಳ, ದೀಕ್ಷಿತ್ ಸೇರಿದಂತೆ ಯೂತ್ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ಪಧಾದಿಕಾರಿಗಳು ಪಾಲ್ಗೊಂಡಿದ್ದರು.










