ಉಜ್ಬೇಕಿಸ್ತಾನದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 18 ಮಕ್ಕಳು ಸಾವು : ಭಾರತದ ವಿರುದ್ಧ ಮತ್ತೆ ಆರೋಪ…

48
firstsuddi

ತಾಷ್ಕೆಂಟ್ : ಗ್ಯಾಂಬಿಯಾ ದೇಶದ ಸುಮಾರು 70 ಮಕ್ಕಳ ಸಾವಿಗೆ ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಕಾರಣ ಎಂದು ಆರೋಪ ಹೊರಿಸಲಾಗಿತ್ತು. ಇದೀಗ ಉಜ್ಬೇಕಿಸ್ತಾನವೂ ಇಂಥಹದ್ದೇ ಆರೋಪವನ್ನು ಮಾಡಿದೆ.

ಭಾರತದಲ್ಲಿ ತಯಾರಿಸಿದ ಕೆಮ್ಮಿನ ಸಿರಪ್ ಸೇವಿಸಿ ದೇಶದಲ್ಲಿ ಕನಿಷ್ಠ 18 ಮಕ್ಕಳು ಸಾವನ್ನಪ್ಪಿದ್ದಾರೆ ಎಂದು ಉಜ್ಬೇಕಿಸ್ತಾನ ಹೇಳಿಕೊಂಡಿದೆ. 

ಉಸಿರಾಟದ ತೊಂದರೆ ಇರುವ ಮಕ್ಕಳಿಗೆ ಡಾಕ್-1 ಮ್ಯಾಕ್ಸ್ ಔಷಧವನ್ನು ನೀಡಲಾಗಿದೆ. ಈ ಔಷಧಿಯನ್ನು ಭಾರತದಲ್ಲಿ ತಯಾರಿಸಲಾಗುತ್ತದೆ. ಔಷಧಿ ನೀಡಿದ ಬಳಿಕ 21 ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ 18 ಮಕ್ಕಳು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗುವ ಮೊದಲು ಸತ್ತ ಮಕ್ಕಳು ಮನೆಯಲ್ಲಿ ಈ ಔಷಧಿಯನ್ನು 2 ರಿಂದ 7 ದಿನಗಳವರೆಗೆ ದಿನಕ್ಕೆ 3-4 ಬಾರಿ ತೆಗೆದುಕೊಂಡಿದ್ದಾರೆ.

ಸಿರಪ್ ಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವುಗಳಲ್ಲಿ ಎಥಿಲೀನ್ ಗ್ಲೈಕೋಲ್ ಎಂಬ ವಿಷಕಾರಿ ಅಂಶ ಪತ್ತೆಯಾಗಿದೆ ಎಂದು ಉಜ್ಬೇಕಿಸ್ತಾನದ ಆರೋಗ್ಯ ಸಚಿವಾಲಯ ತಿಳಿಸಿದೆ. ಇದರ ವಿರುದ್ಧ ಅಲ್ಲಿನ ಸರ್ಕಾರ ತನಿಖೆಗೆ ಸೂಚಿಸಿದೆ.