ಉಡುಪಿ : ಮಣಿಪಾಲ ಎಂಐಟಿ ಕ್ಯಾಂಪಸ್ ನಲ್ಲಿ 95 ಕೊರೊನಾ ಕೇಸ್ ಪತ್ತೆ!

117
Firstsuddi

ಉಡುಪಿ : ಜಿಲ್ಲೆಯಲ್ಲಿ ನಾಲ್ಕು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮಣಿಪಾಲ ಎಂಐಟಿ ಕ್ಯಾಂಪಸ್ ನಲ್ಲಿ ಒಟ್ಟು 95 ಪ್ರಕರಣಗಳು ಪತ್ತೆಯಾಗಿವೆ. ಜಿಲ್ಲಾಧಿಕಾರಿಗಳ ಸೂಚನೆಯಂತೆ ಮಣಿಪಾಲ ಕ್ಯಾಂಪಸ್ ನ್ನು ಕಂಟೇನ್ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.
ಜಿಲ್ಲೆಯಲ್ಲಿ ಕೊರೊನಾ ಹೆಚ್ಚಾಗುತ್ತಿರುವ ಹಿನ್ನಲೆ ಎಂಐಟಿ ಕ್ಯಾಂಪಸ್ ನ 5,000 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗಿದ್ದು, ಈ ಪೈಕಿ ಒಟ್ಟು 95 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಸಾರ್ವಜನಿಕ ಸ್ಥಳ, ಸಮಾರಂಭಗಳಲ್ಲಿ ಎಚ್ಚರ ವಹಿಸಬೇಕು. ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಹಾಗೂ ಸ್ಯಾನಿಟೈಸ್ ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಜಗದೀಶ್ ಅವರು ತಿಳಿಸಿದ್ದಾರೆ.